ಮದ್ಯಪಾನ, ಮಾರಾಟ ನಿಷೇಧ

web
Published on

ಧಾರವಾಡ: ಮತ ಏಣಿಕೆಯಂದು ಶಾಂತಿ, ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಜೂ. ೩ರ ಮಧ್ಯರಾತ್ರಿಯಿಂದ ಜೂ. ೪ರ ಮಧ್ಯರಾತ್ರಿವರೆಗೆ ಜಿಲ್ಲೆಯಾದ್ಯಂತ ಮದ್ಯಪಾನ, ಮಾರಾಟ, ಸಾಗಾಣಿಕೆ ಮತ್ತು ಸಂಗ್ರಹಣೆಯನ್ನು ನಿಷೇಽಸಿ ಜಿಲ್ಲಾಽಕಾರಿ ದಿವ್ಯ ಪ್ರಭು ಆದೇಶಿಸಿದ್ದಾರೆ. ಅಂದು ಭಾರತೀಯ ತಯಾರಿಕೆಯ ಮದ್ಯದ ಅಂಗಡಿಗಳು, ಬಿಯರ್ ಬಾರ್‌ಗಳು, ಕ್ಲಬ್‌ಗಳು ಮತ್ತು ಮದ್ಯದ ಡಿಪೋಗಳನ್ನು ಮುಚ್ಚಬೇಕು. ತಪ್ಪಿದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಽಕಾರಿ ಆದೇಶದಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net