ಕಲುಷಿತ ನೀರು ಕುಡಿದು ಮಹಿಳೆ ಸಾವು, ಮಕ್ಕಳೂ ಸೇರಿ ಹಲವರು ಆಸ್ಪತ್ರೆಗೆ ದಾಖಲು

WaterRaychur
Published on

ರಾಯಚೂರು: ಕಲುಷಿತ ನೀರು ಕುಡಿದ ಪರಿಣಾಮವಾಗಿ ಮಹಿಳೆ ಸಾವನ್ನಪ್ಪಿದ್ದು, ನೂರಾರು ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.

ಇಂದಿರಾನಗರದ ನಿವಾಸಿ ಮಲ್ಲಮ್ಮ (40) ಸಾವನ್ನಪ್ಪಿರುವ ದುರ್ದೈವಿ. ನಗರಸಭೆಯಿಂದ ಸರಬರಾಜಾಗುವ ಈ ನೀರು ಕುಡಿದಿರುವ ಇನ್ನೂ ಹಲವರು ಅಸ್ವಸ್ಥಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ 60 ಕ್ಕೂ ಹೆಚ್ಚು ಜನರು ದಾಖಲಾಗಿದ್ದು, ನಿರ್ಜಲೀಕರಣದಿಂದ ಅಸ್ವಸ್ಥಗೊಂಡಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಹೆಚ್ಚಾಗಿ ಚಿಕ್ಕ ಮಕ್ಕಳು ತೀವ್ರ ಸಮಸ್ಯೆಯಿಂದ ಬಳಲುತ್ತಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net