ಅಂಚೆಭೂವನಹಳ್ಳಿ ಗ್ರಾಮದಲ್ಲಿ ನೀರಿನ ಅಭಾವ: ಪರಿಶೀಲನೆ ನಡೆಸಿದ ಜಿಲ್ಲಾ ಪಂಚಾಯಿತಿ ಸಿಇಒ ಶೇಖ್ ತನ್ವೀರ್ ಆಸಿಫ್

4
Published on

ಮಂಡ್ಯ: ನಾಗಮಂಗಲ ತಾಲೂಕು ಅಂಚೆಭೂವನಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿಗೆ ಅಭಾವ ಎದುರಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಶೇಖ್ ತನ್ವೀರ್ ಆಸಿಫ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮಲ್ಲಸಂದ್ರ ಗ್ರಾಮದ ಬಳಿ ಇರುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆ, ಶಿಂಷಾ ಅಣೆಕಟ್ಟೆಯ ಜಾಕ್ವೆಲ್ ಪರಿಶೀಲನೆ ನಡೆಸಿದರು. ಅಂತೆಯೆ ಪ್ರತಿದಿನ ನೀರಿನ ಹದಿನಾಲ್ಕು ಅಂಶಗಳನ್ನು ಪರೀಕ್ಷಿಸಿ ಸರಬರಾಜು ಮಾಡಲು ಕ್ರಮವಹಿಸಿ. ನಿರ್ವಹಣೆ ಸಂಬಂಧ ಅಗತ್ಯ ದಾಖಲಾತಿಗಳನ್ನು ನಿರ್ವಹಿಸಲು ಸೂಚಿಸಿದರು.

ಮಳೆ ಕೊರತೆಯಿಂದ ಕುಡಿಯುವ ನೀರಿನ ಅಭಾವ ಉಂಟಾಗುವ ಗ್ರಾಮಗಳನ್ನು ಗುರುತಿಸಿ ಕುಡಿಯುವ ನೀರಿಗೆ ಯಾವುದೇ ತೊಂದರೆ ಉಂಟಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ ಸಿಇಒ, ಮಾಯಿಗೋನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನರಗಲು ಗ್ರಾಮದ ಹೊನ್ನಾವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆ ಮಲ್ಲೇನಹಳ್ಳಿ ಗ್ರಾಮದ, ದೇವಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದ್ಯಾಮಸಂದ್ರ ಗ್ರಾಮಗಳಲ್ಲಿನ ಕುಡಿಯುವ ನೀರಿನ ಸಮಸ್ಯೆಗಳ ಬಗ್ಗೆ ಪರಿಶೀಲಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net