ಆಲಂದೂರಿನಲ್ಲಿ ಕುಡಿಯುವ ನೀರಿಗೆ ಅಭಾವ

byn-1
Published on

ಬೈಂದೂರು: ಯಡ್ತರೆ ಗ್ರಾಮದ ಆಲಂದೂರಿನಲ್ಲಿ ಈ ವರ್ಷವೂ ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಎದುರಾಗಿದೆ. ಹಲವು ವರ್ಷಗಳಿಂದ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಕಾಡುತ್ತಿದ್ದರೂ ಶಾಶ್ವತ ಪರಿಹಾರಕ್ಕೆ ಸ್ಥಳೀಯ ಆಡಳಿತ ಮುಂದಾಗಿಲ್ಲ.

ಈ ಹಿಂದೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿದ್ದ ಈ ಗ್ರಾಮ ಈಗ ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ ಸೇರಿದ್ದು, ಆಡಳಿತಾತ್ಮವಾಗಿ ತಾಂತ್ರಿಕ ಸಮಸ್ಯೆ ಉಂಟಾಗಿದೆ. ಈ ಗ್ರಾಮದಲ್ಲಿ ಸುವಾರು 70ಕ್ಕೂ ಅಧಿಕ ಕುಟುಂಬಗಳು ನೀರಿನ ಸಮಸ್ಯೆ ಎದುರಿಸುತ್ತಿವೆ. ಕೋಣಮಕ್ಕಿ, ನಂದನಹಾಡಿ, ಬಿಲ್ಲುಕೇರಿ, ಊದೂರು, ಹಡವಿನಗದ್ದೆ ಮುಂತಾದ ಭಾಗದಲ್ಲೂ ನೀರಿನ ಕೊರತೆ ಇದೆ.

ಬೈಂದೂರು ಪಟ್ಟಣ ಪ್ರದೇಶದಲ್ಲಿ ಕುಡಿಯುವ ನೀರಿಗೆ ವ್ಯವಸ್ಥೆ ಕಲ್ಪಿಸಲಾಗಿದ್ದು, ಗ್ರಾಮೀಣ ಭಾಗಕ್ಕೂ ಸಮರ್ಪಕವಾಗಿ ನೀರು ಪೂರೈಕೆಯಾಗಬೇಕೆಂದು ಜನರು ಆಗ್ರಹಿಸಿದ್ದಾರೆ. ಕಳೆದ ಹಲವು ವರ್ಷಗಳಿಂದ ಆಲಂದೂರು ಭಾಗದಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕಾಡುತ್ತಿದೆ. ಸಮಸ್ಯೆ ಪರಿಹಾರಕ್ಕೆ ಶಾಶ್ವಕ ಯೋಜನೆ ರೂಪಿಸಬೇಕು ಎಂದು ಸ್ಥಳೀಯ ನಿವಾಸಿ ಉದಯ ವಾಕೋಡಿ ಆಗ್ರಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net