ಕುಡಿಯುವ ನೀರು ಪೂರೈಕೆ ಸ್ಥಗಿತ

water supply
ಹಳೆಯಂಗಡಿಯಲ್ಲಿ ಕುಡಿಯುವ ನೀರಿನ ಪೂರೈಕೆ ಸ್ಥಗಿತವಾಗಿದ್ದು, ಗ್ರಾಮಸ್ಥರ ಮನವಿಗೆ ಸ್ಪಂದಿಸದ ಸ್ಥಳೀಯಾಡಳಿತದ ನಡೆಯನ್ನು ವಿರೋಧಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.
Published on

ಹಳೆಯಂಗಡಿ: ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂದಿರಾನಗರ ವಾರ್ಡ್‌ನಲ್ಲಿ ಕಳೆದ ಮೂರು ತಿಂಗಳಿನಿಂದ ಕುಡಿಯುವ ನೀರಿನ ಸಮಸ್ಯೆ ಇದ್ದು, ಈ ಬಗ್ಗೆ ಸಂಬಂಧಪಟ್ಟ ಆಡಳಿತಕ್ಕೆ ಮನವಿ ಸಲ್ಲಿಸಿದರೂ ಇದುವರೆಗೂ ಸಮರ್ಪಕವಾಗಿ ನೀರು ಪೂರೈಕೆಯಾಗುತ್ತಿಲ್ಲ ಎಂದು ಆರೋಪಿಸಿ ಸ್ಥಳೀಯ ನಾಗರಿಕರು ಪಂಚಾಯಿತಿ ಎದುರು ಪ್ರತಿಭಟನೆ ನಡೆಸಿದರು.

ಸ್ಥಳೀಯ ವಾರ್ಡ್ ಸದಸ್ಯ ಅಬ್ದುಲ್ ಖಾದರ್ ಮಾತನಾಡಿ, ಕಳೆದ ಮೂರು ತಿಂಗಳಿನಿಂದ ಪಂಚಾಯಿತಿ ವ್ಯಾಪ್ತಿಯ ಇಂದಿರಾ ನಗರ ಕುಡಿಯುವ ನೀರಿನ ಸಮಸ್ಯೆ ಇದ್ದು, ಈ ಬಗ್ಗೆ ಅನೇಕ ಬಾರಿ ಅಧ್ಯಕ್ಷರಿಗೆ, ನೀರಿನ ಸಮಿತಿಯ ಅಧ್ಯಕ್ಷರಿಗೆ, ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚುನಾವಣೆ ಕರ್ತವ್ಯದಲ್ಲಿ ಇದ್ದಾರೆ ಎಂಬ ಸಬೂಬು ಹೇಳುತ್ತಿದ್ದು, ಯಾರೂ ಕೂಡ ನೀರಿನ ಸಮಸ್ಯೆ ನಿವಾರಣೆಗೆ ಸ್ಪಂದಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕುಡಿಯುವ ನೀರಿಲ್ಲದೆ ಜನ ಹೈರಾಣಾಗಿದ್ದಾರೆ. ಪಂಚಾಯಿತಿ ಆಡಳಿತ ವಿಲವಾಗಿದ್ದು, ಮುಂದಿನ ಮೂರು ದಿನದ ಒಳಗಡೆ ಪಂಚಾಯಿತಿಯಿಂದ ಕುಡಿಯುವ ನೀರಿನ ವ್ಯವಸ್ಥೆ ಮಾಡದಿದ್ದರೆ ಉಗ್ರ ಪ್ರತಿಭಟನೆ ನಡೆಸಲಾಗುವುದು.- ಅಬ್ದುಲ್ ಖಾದರ್, ಗ್ರಾಪಂ ಸದಸ್ಯ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net