

ಮಂಡ್ಯ: ನಗರ ನೀರು ಸರಬರಾಜು ವ್ಯವಸ್ಥೆ ನಿರ್ವಹಣೆ ಅಡಿ ಶ್ರೀರಂಗಪಟ್ಟಣ ಸಮೀಪವಿರುವ ಮೂಲಸ್ಥಾವರದ ಬಳಿ 1016 ಮಿ.ಮೀ. ವ್ಯಾಸದ ಎಂ.ಎಸ್ ನೀರು ಸರಬರಾಜು ಕೊಳವೆ ಮಾರ್ಗದಲ್ಲಿ ಗಣನೀಯ ಪ್ರಮಾಣದಲ್ಲಿ ನೀರು ಸೋರುವಿಕೆ ಕಂಡು ಬಂದಿದೆ. ಸದರಿ ಕೊಳವೆ ಮಾರ್ಗದ ದುರಸ್ಥಿ ಕಾಮಗಾರಿಯನ್ನು ಸೆ.12ರಂದು ಕೈಗೊಳ್ಳಲಾಗಿದೆ. ಆದ್ದರಿಂದ ಮಂಡ್ಯ ನಗರಕ್ಕೆ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ನೀರು ಬಂದ ವೇಳೆ ಶೇಖರಿಸಿಟ್ಟುಕೊಂಡು ಜಲಮಂಡಳಿಯೊಂದಿಗೆ ಸಹಕರಿಸಬೇಕೇಂದು ಜಲಮಂಡಳಿ ಪ್ರಕಟಣೆ ತಿಳಿಸಿದೆ.