ವಿದ್ಯಾರ್ಥಿಗಳಿಗೆ ನಶೆ ಏರಿಸಲು ಆಫರ್: ಬಾರ್ ಮಾಲೀಕನ ವಿರುದ್ಧ ಕೇಸ್

Mng_Bar offer
Published on

ಮಂಗಳೂರು: ದೇರೆಬೈಲ್ ಕೊಂಚಾಡಿಯಲ್ಲಿರುವ ಬಾರೊಂದರಲ್ಲಿ ವಿದ್ಯಾರ್ಥಿಗಳಿಗೆ ಮದ್ಯದ ನಶೆ ಏರಿಸಲು ಆಫರ್ ನೀಡಿದ ಬಾರ್ ಮಾಲೀಕರ ವಿರುದ್ಧ ಅಬಕಾರಿ ಇಲಾಖೆ ಪ್ರಕರಣ ದಾಖಲಿಸಿದೆ.

ಬಾರ್‌ನಲ್ಲಿ ಆಯೋಜಿಸಿದ್ದ ನೈಟ್ ಪಾರ್ಟಿಯ ಸ್ಟಿಕ್ಕರ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇದಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ವಿಷಯ ಗಮನಕ್ಕೆ ಬರುತ್ತಿದ್ದಂತೆ ಪಾರ್ಟಿಗೆ ಕಾವೂರು ಪೊಲೀಸರು ತಡೆಯೊಡ್ಡಿ, ಬಾರ್ ಾಲೀಕನಿಗೆ ನೋಟಿಸ್ ನೀಡಿದ್ದರು. ಆ ಬಳಿಕ ಅಬಕಾರಿ ಇಲಾಖೆ ಎಚ್ಚೆತ್ತುಕೊಂಡು ಅಬಕಾರಿ ಕಾಯ್ದೆಯಡಿ ಪ್ರಕರಣ ದಾಖಲಿಸಿದೆ.

ಸ್ಕೂಲ್ ಐಡಿ ತಂದರೆ ವಿದ್ಯಾರ್ಥಿಗಳಿಗೆ ಶೇ.15 ಆಫರ್ ನೀಡಲಾಗುತ್ತದೆ. ವಿದ್ಯಾರ್ಥಿನಿಯರಿಗೆ ಐಡಿ ತೋರಿಸಿದರೆ ಫ್ರೀ ಶೂಟರ್ ್ಯವಸ್ಥೆ ಇದೆಯೆಂದು ಪಾರ್ಟಿ ಆಯೋಜಕರು ಆಫರ್ ನೀಡಿದ್ದರು. ಇದು ವಿದ್ಯಾರ್ಥಿಗಳನ್ನು ಮದ್ಯ ಸೇವನೆಗೆ ಪ್ರೋತ್ಸಾಹ ನೀಡಿದಂತಾಗಿದೆ ಎಂದು ಸಾರ್ವಜನಿಕರಿಂದ ಆಕ್ಷೇಪ ವ್ಯಕ್ತವಾಗಿತ್ತು.

ದೇರೆಬೈಲ್‌ನ ಈ ಬಾರ್‌ಗೆ ಸಿಎಲ್-7 ಮಾದರಿಯ ಲೈಸನ್ಸ್ ಇರುವುದೆಂದು ಅಬಕಾರಿ ಅಧಿಕಾರಿಗಳು ದಾಖಲಿಸಿರುವ ಎಫ್‌ಐಆರ್‌ನಲ್ಲಿ ಉಲ್ಲೇಖವಾಗಿದೆ. ಇದರ ಪ್ರಕಾರ ಅಲ್ಲಿ ಲಾಡ್ಜ್‌ಗಳಿಗೆ ಬರುವ ಅತಿಥಿಗಳಿಗೆ ಮಾತ್ರ ಮದ್ಯ ಪೂರೈಸಲು ಅವಕಾಶ. ಇತರ ಸಾರ್ವಜನಿಕರಿಗೆ ಮದ್ಯ ಮಾರಾಟ ಮಾಡುವಂತಿಲ್ಲ. ಆದರೆ ಈ ಬಾರ್‌ನಲ್ಲಿ ಸಾರ್ವಜನಿಕರಿಗೆ ಚಿಲ್ಲರೆ ಮದ್ಯ ಮಾರಾಟ ಮಾಡಲಾಗುತ್ತಿತ್ತು ಎನ್ನಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net