ಮೊಟ್ಟೆ ವಿತರಣೆ ಕಾರ್ಯಕ್ಕೆ ಚಾಲನೆ

KRP 9
Published on

ಕೆ.ಆರ್.ಪೇಟೆ: ಮೊಟ್ಟೆ, ಬಾಳೆಹಣ್ಣು ಹಾಗೂ ಶೇಂಗಾ ಚಿಕ್ಕಿ ಮಕ್ಕಳಿಗೆ ಅಗತ್ಯ ಪೌಷ್ಟಿಕಾಂಶಗಳನ್ನೊಳಗೊಂಡ ಆಹಾರ ಪದಾರ್ಥಗಳಾಗಿದ್ದು, ಅಜೀಂ ಪ್ರೇಮ್ಜಿ ಫೌಂಡೇಷನ್ ಅವರಿಗೆ ತಾಲೂಕಿನ ವಿದ್ಯಾರ್ಥಿಗಳ ಪರವಾಗಿ ಧನ್ಯವಾದ ತಿಳಿಸಲು ಬಯಸುತ್ತೇನೆ ಎಂದು ಶಾಸಕ ಎಚ್.ಟಿ.ಮಂಜು ತಿಳಿಸಿದರು.


ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ವಾರದ ಆರು ದಿನಗಳು ಮೊಟ್ಟೆ ವಿತರಣೆ ಮಾಡುವ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು.


ವಿವಿಧ ಪೋಷಕಾಂಶಗಳುಳ್ಳ ಆಹಾರ ಪದಾರ್ಥಗಳನ್ನು ಸೇವಿಸಿದರೆ ಅವರು ದೈಹಿಕವಾಗಿ ಸದೃಢರಾಗುತ್ತಾರೆ. ವಿದ್ಯಾರ್ಥಿಗಳು ಪೂರಕ ಪೌಷ್ಟಿಕ ಆಹಾರವನ್ನು ಸೇವಿಸುವ ಮೂಲಕ ಸದೃಢರಾಗಿ ಬೌದ್ಧಿಕ ಮಟ್ಟವನ್ನು ಹೆಚ್ಚಿಸಿಕೊಂಡು ಉತ್ತಮ ಜ್ಞಾನ ಗಳಿಸಬೇಕು ಎಂದು ಸಲಹೆ ನೀಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಸ್.ಸೀತಾರಾಮು, ಪಿಎಂ ಪೋಷಣೆ ಸಹಾಯಕ ನಿರ್ದೇಶಕ ಸಿ.ಎನ್.ಯತೀಶ್, ಸಮನ್ವಯಾಧಿಕಾರಿ ಎಚ್.ಕೆ.ಮಂಜುನಾಥ್, ತಾಲೂಕು ಕಸಾಪ ಅಧ್ಯಕ್ಷ ಪೂರ್ಣಚಂದ್ರತೇಜಸ್ವಿ, ತಾಲೂಕು ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಸಿ.ಕೆ.ಶಿವರಾಮೇಗೌಡ, ಕಾರ್ಯದರ್ಶಿ ಪಿ.ಜೆ.ಕುಮಾರ್, ಹಿರಿಯ ಉಪಾಧ್ಯಕ್ಷ ಎಸ್.ಆರ್.ಆನಂದ್‌ಕುಮಾರ್, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಎಸ್.ಎಂ.ಬಸವರಾಜು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net