

ಚಾಮರಾಜನಗರ: ಕೊಳ್ಳೇಗಾಲ ಪಟ್ಟಣದ ಬಸವೇಶ್ವರ ನಗರದ ಶ್ರೀ ಗಂಗಾ ಚಾರಿಟಬಲ್ ಟ್ರಸ್ಟ್ ಕಚೇರಿಯಲ್ಲಿ ಆಯೋಜಿಸಿದ್ದ ಶ್ರೀ ಗಂಗಾ ಚಾರಿಟಬಲ್ ಟ್ರಸ್ಟ್ ವತಿಯಿಂದ 2024-25 ನೇ ಸಾಲಿನ ಟಿಎಸ್ಪಿ ಯೋಜನೆಯಡಿ ಹತ್ತು ದಿನಗಳ ಉಚಿತ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮಕ್ಕೆ ಮಂಗಳವಾರ ಮೈಸೂರು ಸಿಡಾಕ್ ಜಂಟಿ ನಿರ್ದೇಶಕ ಮಂಜುನಾಥ್ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಕೌಶಲ ಅಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಉದ್ಯಮ ಶೀಲತಾ ಅಭಿವೃದ್ಧಿ ಕೇಂದ್ರ(ಸಿಡಾಕ್)ಧಾರವಾಡ, ಕರ್ನಾಟಕ ಕೌಶಲಾಭಿವೃದ್ಧಿ ನಿಗಮ ಬೆಂಗಳೂರು ಹಾಗೂ ಗಂಗಾ ಚಾರಿಟಬಲ್ ಟ್ರಸ್ಟ್ ರಿ. ಮೈಸೂರು ಸಹಯೋಗದೊಂದಿಗೆ ಈ ತರಬೇತಿ ಹಮ್ಮಿಕೊಳ್ಳಲಾಗಿದೆ. ಹತ್ತು ದಿನಗಳ ಉಚಿತ ಉದ್ಯಮ ಶೀಲ ತರಬೇತಿ ಕಾರ್ಯಕ್ರಮದ ಬಗ್ಗೆ ಶಿಬಿರಾರ್ಥಿಗಳಿಗೆ ಕೌಶಲಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಕುರಿತು ತಿಳಿಸಿದರು.
ತರಬೇತಿ ಕಾರ್ಯಕ್ರಮದಲ್ಲಿ ಸುಮಾರು ಮೂವತ್ತಕ್ಕೂ ಹೆಚ್ಚು ಶಿಬಿರಾರ್ಥಿಗಳು ಹೆಸರನ್ನು ನೋಂದಾಯಿಸಿಕೊಂಡರು.
ಚಾ.ನಗರ ಸಿಡಾಕ್ ಜಿಲ್ಲಾ ತರಬೇತಿ ಅಧಿಕಾರಿ ಅರುಣ್ ಕುಮಾರ್, ಕೊಡುಗು ಜಿಲ್ಲಾ ತರಬೇತಿ ಅಧಿಕಾರಿ ಮಿಥುನ್ ಕುಮಾರ್, ಮುಖಂಡ ಮುಳ್ಳೂರು ಮಂಜುನಾಥ್, ಗಂಗಾ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ರಾಜ್ ಕಾಮಯ್ಯ, ಎಲ್.ರಾಜಣ್ಣ ಹಾಗೂ ಕಚೇರಿ ಸಿಬ್ಬಂದಿ ಇದ್ದರು.