

ಕಾಸರಗೋಡು: ನುಳ್ಳಿಪ್ಪಾಡಿಯ ಸೀತಮ್ಮ ಪುರುಷ ನಾಯಕ ಕನ್ನಡ ಭವನ ಮತ್ತು ಗ್ರಂಥಾಲಯದಲ್ಲಿ ಡಾ.ವಾಮನ್ ರಾವ್ ಬೇಕಲ್ ಸ್ಥಾಪಕ ಸಂಚಾಲಕತ್ವದಲ್ಲಿ ಕೇರಳ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕಾಸರಗೋಡು ಜಿಲ್ಲಾ ಘಟಕದ ಉದ್ಘಾಟನೆ ಜರುಗಿತು.
ಕರ್ನಾಟಕ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ.ಮಾನಸ ಮೈಸೂರು ಕನ್ನಡ ಭುವನೇಶ್ವರಿಯ ಭಾವಚಿತ್ರಕ್ಕೆ ಹಾರಾರ್ಪಣೆ ಮಾಡಿ, ಕನ್ನಡ ಧ್ವಜವನ್ನು, ಪರಿಷತ್ತಿನ ಕಾಸರಗೋಡು ಜಿಲ್ಲಾ ಘಟಕದ ಅಧ್ಯಕ್ಷ ವಿರಾಜ್ ಅಡೂರುಗೆ ಹಸ್ತಾಂತರಿಸುವ ಮೂಲಕ ಚಾಲನೆ ನೀಡಿದರು.
ಶಿಕ್ಷಣ ತಜ್ಞ ವಿ.ಬಿ.ಕುಳಮರ್ವ ಅಧ್ಯಕ್ಷತೆ ವಹಿಸಿದ್ದರು. ಕೇರಳ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕರ್ನಾಟಕ ಸಂಚಾಲಕರಾಗಿ ಸಾಹಿತಿ ಜಯಾನಂದ ಪೆರಾಜೆ ಹಾಗೂ ಶಿಕ್ಷಕಿ ಡಾ.ಶಾಂತ ಪುತ್ತೂರು ಅವರಿಗೆ ಅಧಿಕಾರ ಹಸ್ತಾಂತರ ಮಾಡಲಾಯಿತು. ಕಸಾಪ ಕೇರಳ ಗಡಿನಾಡ ಘಟಕದ ಅಧ್ಯಕ್ಷ ಡಾ.ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ, ನಿವೃತ್ತ ಪ್ರಾಂಶುಪಾಲ ಪ್ರೊ.ಪಿ.ಎನ್.ಮೂಡಿತ್ತಾಯ, ನಿವೃತ್ತ ಶಿಕ್ಷಕ ಬಾಲ ಮಧುರಕಾನನ, ಕಾಸರಗೋಡು ಜಿಲ್ಲಾ ಗಮಕ ಕಲಾ ಪರಿಷತ್ತಿನ ಕೇರಳ ಗಡಿನಾಡ ಘಟಕದ ಅಧ್ಯಕ್ಷ ತೆಕ್ಕೆಕೆರೆ ಶಂಕರನಾರಾಯಣ ಭಟ್, ಸಾಮಾಜಿಕ ಮುಖಂಡ ಡಾ.ವೆಂಕಟ್ರಮಣ ಹೊಳ್ಳ, ಕಾಸರಗೋಡು ಜಿಲ್ಲಾ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರವಿ ನಾಯ್ಕಪು, ಸಾಹಿತಿ ರೇಖಾ ಸುದೇಶ್ ರಾವ್, ಕನ್ನಡ ಭವನದ ನಿರ್ದೇಶಕ ಪ್ರೊ.ಎ.ಶ್ರೀನಾಥ್, ಕನ್ನಡ ಭವನದ ಕಾರ್ಯದರ್ಶಿ ವಸಂತ ಕೆರೆಮನೆ ಉಪಸ್ಥಿತರಿದ್ದರು.
ಸುಭಾಷಿಣಿ ಚಂದ್ರ ಕನ್ನಟಿಪ್ಪಾರೆ ಪ್ರಾರ್ಥನೆ ಹಾಡಿದರು. ಪರಿಷತ್ತಿನ ಕೇಂದ್ರ ಸಮಿತಿಯ ಸ್ಥಾಪಕ ಸಂಚಾಲಕ ಡಾ.ವಾಮನ್ ರಾವ್ ಬೇಕಲ್ ಸ್ವಾಗತಿಸಿದರು. ಕಸಾಪ ಕೇರಳ ಗಡಿನಾಡ ಘಟಕದ ಸಂಘಟನಾ ಕಾರ್ಯದರ್ಶಿ ವಿಶಾಲಾಕ್ಷ ಪುತ್ರಕಳ ನಿರೂಪಿಸಿದರು. ಕೆ.ನರಸಿಂಹ ಭಟ್ ಏತಡ್ಕ ವಂದಿಸಿದರು. ವಿರಾಜ್ ಅಡೂರು ಅಧ್ಯಕ್ಷತೆಯಲ್ಲಿ ಚುಟುಕು ಕವಿಗೋಷ್ಠಿ ನಡೆಯಿತು.