

ಮೈಸೂರು: ಜೆಎಸ್‌ಎಸ್ ವಿಜ್ಞಾನ ಮತ್ತು ತಂತ್ರಜ್ಞಾನ ವಿವಿ ವತಿಯಿಂದ ಆಯೋಜಿಸಿರುವ ನಾಲ್ಕನೆಯ ಅಂತರ ಕಾಲೇಜು ಕ್ರೀಡಾಕೂಟ, 2023-24ನೇ ಸಾಲಿನ ಕ್ರೀಡಾಕೂಟಕ್ಕೆ ಗುರುವಾರ ಚಾಲನೆ ದೊರೆಯಿತು.
ಮೈಸೂರು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ.ಸಿ.ಕೃಷ್ಣ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿ, ಕ್ರೀಡೆಯಲ್ಲಿ ಭಾಗವಹಿಸುವ ಮೂಲಕ ದೈಹಿಕ ಮತ್ತು ಮಾನಸಿಕ ಸ್ವಾಸ್ಥ್ಯ ಕಾಪಾಡಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಜೆಎಸ್‌ಎಸ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದ ಉಪ ಕುಲಪತಿ ಡಾ.ಎ.ಎನ್.ಸಂತೋಷ್ ಕುಮಾರ್, ಪ್ರಾಂಶುಪಾಲ ಡಾ.ಸಿ.ನಟರಾಜು, ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ.ಸಿ.ರೇವಣ್ಣ ಇತರರಿದ್ದರು. ಕ್ರೀಡಾಕೂಟದಲ್ಲಿ ಮೈಸೂರು ವಲಯದ 12 ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ.