ಕುಶಾಲನಗರದಲ್ಲಿ ನಮ್ಮ ಕ್ಲಿನಿಕ್‌ಗೆ ಚಾಲನೆ

28Kush05
Published on

ಕುಶಾಲನಗರ: ನಮ್ಮ ಕ್ಲಿನಿಕ್ ಸೌಲಭ್ಯವನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಶಾಸಕ ಡಾ.ಮಂತರ್‌ಗೌಡ ಹೇಳಿದರು.
ಪಟ್ಟಣದ ಬಿ.ಎಂ. ರಸ್ತೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಆರಂಭಿಸಿರುವ ನಮ್ಮ ಕ್ಲಿನಿಕ್‌ಗೆ ಸೋಮವಾರ ಚಾಲನೆ ನೀಡಿ ಮಾತನಾಡಿದರು.

ನಮ್ಮ ಕ್ಲಿನಿಕ್ ಆರಂಭಿಸಿರುವ ಕಾರಣ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಒತ್ತಡ ನಿವಾರಣೆಯಾಗಲಿದೆ. ಇಲ್ಲಿ ಕೂಡ ನುರಿತ ವೈದ್ಯ, ತಾಂತ್ರಿಕ ಸಿಬ್ಬಂದಿ ಲಭ್ಯವಿದ್ದು, ಬೆಳಗ್ಗೆ 9.30 ರಿಂದ ಸಂಜೆ 4.30 ರವರೆಗೆ ಸೇವೆ ದೊರೆಯಲಿದೆ ಎಂದರು.

ಗರ್ಭಿಣಿಯರು, ನವಜಾತ ಶಿಶುಗಳ ಆರೈಕೆ ಸೇರಿದಂತೆ ಹೊರರೋಗಿಗಳ ಚುಚ್ಚುಮದ್ದು, ವ್ಯಾಕ್ಸಿನೇಷನ್ ಪಡೆದುಕೊಳ್ಳಲು ಇಲ್ಲಿ ಅನುಕೂಲ ಕಲ್ಪಿಸಲಾಗಿದೆ. ವಿವಿಧ ಮಾದರಿಯ ಪರೀಕ್ಷೆಗಳನ್ನು ಖಾಸಗಿ ಲ್ಯಾಬ್‌ಗಳಿಗೆ ಸೂಚಿಸುವ ಬದಲು ಸಾಧ್ಯವಾದಷ್ಟು ಎಲ್ಲ ಪರೀಕ್ಷೆಗಳನ್ನು ಇಲ್ಲಿಯೇ ಮಾಡಲು ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸತೀಶ್, ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್, ಕುಶಾಲನಗರ ಪುರಸಭೆ ಮಾಜಿ ಉಪಾಧ್ಯಕ್ಷೆ ಸುರಯ್ಯಭಾನು, ಸದಸ್ಯರಾದ ಎಂ.ಕೆ.ದಿನೇಶ್, ಎಂ.ಬಿ.ಸುರೇಶ್, ಶೇಖ್ ಖಲೀಮುಲ್ಲಾ, ಜಯಲಕ್ಷ್ಮೀ, ಪುಟ್ಟಲಕ್ಷ್ಮೀ, ಕುಡಾ ಮಾಜಿ ಅಧ್ಯಕ್ಷ ಮಂಜುನಾಥ್ ಗುಂಡುರಾವ್, ಕಾಂಗ್ರೆಸ್ ಮುಖಂಡರಾದ ಶಿವಶಂಕರ್, ಕಿರಣ್, ಜೋಸೆಫ್ ವಿಕ್ಟರ್ ಸೋನ್ಸ್, ನಟೇಶ್‌ಗೌಡ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಚ್.ಕೆ.ಶಾಂತಿ, ಪುರಸಭೆ ಮುಖ್ಯಾಧಿಕಾರಿ ಕೃಷ್ಣಪ್ರಸಾದ್ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net