ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

14 - Copy
Published on


ಮೈಸೂರು:
ನಗರ ಪೊಲೀಸ್ ಇಲಾಖೆ ವತಿಯಿಂದ ನಗರ ಸಶಸ್ತ್ರ ಮೀಸಲು ಪಡೆ ಮೈದಾನದಲ್ಲಿ ಆಯೋಜಿಸಿರುವ ಮೂರು ದಿನಗಳ ವಾರ್ಷಿಕ ಕ್ರೀಡಾಕೂಟಕ್ಕೆ ನಗರ ಪಾಲಿಕೆ ಆಯುಕ್ತ ಜಿ.ಲಕ್ಷ್ಮೀಕಾಂತ ರೆಡ್ಡಿ ಗುರುವಾರ ಚಾಲನೆ ನೀಡಿದರು.


ಬಳಿಕ ಮಾತನಾಡಿದ ಅವರು, ಎಲ್ಲರ ಜೀವನದಲ್ಲಿ ಕ್ರೀಡೆಯೂ ಮುಖ್ಯ. ಕ್ರೀಡೆಯಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ ಎಂದರು.

ಪೊಲೀಸ್ ಇಲಾಖೆಯು ತಮ್ಮ ಸಿಬ್ಬಂದಿಗೆ ಕ್ರೀಡಾಕೂಟ ಆಯೋಜಿಸುತ್ತಿರುವುದು ಖುಷಿಯ ವಿಚಾರ. ನಗರ ಪಾಲಿಕೆ ವತಿಯಿಂದಲೂ ನಮ್ಮ ಸಿಬ್ಬಂದಿಗೆ ಕ್ರೀಡಾಕೂಟ ಆಯೋಜಿಸಲಾಗುತ್ತದೆ ಎಂದರು.

ಇದೇ ಕ್ರೀಡಾಪಟುಗಳ ಪಥ ಸಂಚಲನ ನಡೆಯಿತು. ಸಿಎಆರ್, ಎನ್‌ಆರ್, ಕೆಆರ್, ದೇವರಾಜ, ಸಂಚಾರ, ಮಹಿಳಾ ವಿಭಾಗಗಳಿಂದ ನೂರಾರು ಕ್ರೀಡಾಪಟುಗಳು ಭಾಗವಹಿಸಿದ್ದಾರೆ. ಉದ್ಘಾಟನೆ ವೇಳೆ ಪುರುಷ 800 ಮೀ.ಓಟ ಹಾಗೂ ಮಹಿಳೆಯರ 100 ಮೀ. ಓಟದ ಸ್ಪರ್ಧೆ ನಡೆಯಿತು. ಕ್ರೀಡಾಪಟುಗಳು ಪ್ರತಿಜ್ಞಾವಿಧಿ ಸ್ವೀಕಾರಿಸಿದರು. ನಗರ ಪೊಲೀಸ್ ಆಯುಕ್ತ ಬಿ.ರಮೇಶ್, ಡಿಸಿಪಿಗಳಾದ ಪ್ರದೀಪ್‌ಗುಂಟಿ, ಗೀತಾ ಪ್ರಸನ್ನ, ಶಿವರಾಜ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net