ಶೇ.100 ಮತದಾನವಾಗಲಿ

voting
ಬೈಕ್ ಜಾಥಾಕ್ಕೆ ಚಾಲನೆ
Published on

ವಿಜಯವಾಣಿ ಸುದ್ದಿಜಾಲ ದೊಡ್ಡಬಳ್ಳಾಪುರ
ಲೋಕಸಭಾ ಚುನಾವಣೆಯಲ್ಲಿ ಎಲ್ಲ ಅರ್ಹ ಮತದಾರರು ಕಡ್ಡಾಯವಾಗಿ ಮತ ಚಲಾಯಿಸಿ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಶೇ.100 ಮತದಾನ ಆಗುವಂತೆ ನೋಡಿಕೊಳ್ಳಬೇಕಿದೆ ಎಂದು ಉಪವಿಭಾಗಾಧಿಕಾರಿಯೂ ಆದ ಸಹಾಯಕ ಚುನಾವಣಾ ಅಧಿಕಾರಿ ಶ್ರೀನಿವಾಸ್ ಹೇಳಿದರು.
ನಗರಸಭೆ ಕಾರ್ಯಾಲಯದ ಆವರಣದಲ್ಲಿ ತಾಲೂಕು ಸ್ವೀಪ್ ಸಮಿತಿ ವತಿಯಿಂದ ಮತದಾನ ಜಾಗೃತಿ ಮತ್ತು ಅರಿವು ಮೂಡಿಸುವ ಕಾರ್ಯಕ್ರಮದ ಪ್ರಯುಕ್ತ ಹಮ್ಮಿಕೊಂಡಿದ್ದ ಅಂಗವಿಕಲರ ಬೈಕ್ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.
ಚುನಾವಣೆಯಲ್ಲಿ ಹಿರಿಯರು, ವಿಶೇಷವಾಗಿ ಅಂಗವಿಕಲರು ಹಾಗೂ ಮಹಿಳೆಯರು ಮತ ಚಲಾಯಿಸಲು ಬೇಕಾದ ಎಲ್ಲ ಅಗತ್ಯ ಸೌಕರ್ಯಗಳನ್ನು ಮತಗಟ್ಟೆಗಳಲ್ಲಿ ಮಾಡಲಾಗಿದೆ. ಕುಟುಂಬ ಸಮೇತ ಮತಗಟ್ಟೆಗೆ ಆಗಮಿಸಿ, ಹಕ್ಕು ಚಲಾಯಿಸಬೇಕು. ಎಲ್ಲರ ಮತವೂ ಅಮೂಲ್ಯ. ಇಲ್ಲಿ ಎಲ್ಲರೂ ಸಮಾನರು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net