ನೇಣು ಬಿಗಿದುಕೊಂಡು ಚಾಲಕ ಆತ್ಮಹತ್ಯೆ

Published on

ಚಿಂತಾಮಣಿ: ತಾಲೂಕಿನ ಅಂಬಾಜಿದುರ್ಗ ಹೋಬಳಿ ಕೋಟಗಲ್​ ಗ್ರಾಪಂ ವ್ಯಾಪ್ತಿಯ ನರಸಾಪುರದ ಕಾರಿನ ಚಾಲಕ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಅದೇ ಗ್ರಾಮದ ನರಸಿಂಹಪ್ಪ (50) ಮೃತ. ಚಿಕ್ಕಬಳ್ಳಾಪುರದಲ್ಲಿ ಕಾರು ಚಾಲನೆ ಮಾಡಿಕೊಂಡು ಅಲ್ಲಿಯೇ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಮಗ ಮತ್ತು ಸೊಸೆಯನ್ನು ಬುಧವಾರ ತಿರುಪತಿಯ ತಿಮ್ಮಪ್ಪನ ದರ್ಶನಕ್ಕೆ ಕಳುಹಿಸಿಕೊಟ್ಟು, ಹೆಂಡತಿ ಲ್ಮದೇವಮ್ಮ ಅವರಿಂದ 1 ಸಾವಿರ ರೂ. ಪಡೆದುಕೊಂಡು ನರಸಾಪುರಕ್ಕೆ ಹೋಗುವುದಾಗಿ ಹೇಳಿ ತೆರಳಿದ್ದರು. ಬುಧವಾರ ಗ್ರಾಮಸ್ಥರೊಂದಿಗೆ ಚೆನ್ನಾಗಿ ಮಾತನಾಡಿಕೊಂಡಿದ್ದ ನರಸಿಂಹಪ್ಪ ಗುರುವಾರ ಬೆಳಗ್ಗೆ ಗ್ರಾಮದ ಹೊರ ವಲಯದಲ್ಲಿರುವ ಮರವೊಂದರಲ್ಲಿ ಶವವಾಗಿ ನೇತಾಡುತ್ತಿರುವುದನ್ನು ಕಂಡು ಗ್ರಾಮಸ್ಥರು ಕುಟುಂಬಸ್ಥರಿಗೆ ಮತ್ತು ಚಿಂತಾಮಣಿ ಗ್ರಾಮಾಂತರ ಪೊಲೀಸ್​ರಿಗೆ ಮಾಹಿತಿ ನೀಡಿದ್ದಾರೆ. ಪತ್ನಿ ನೀಡಿದ ದೂರಿನ ಮೇಲೆ ಪ್ರಕರಣ ದಾಖಲು ಮಾಡಿಕೊಂಡು ಪೊಲೀಸರು ಇಲ್ಲಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀೆ ನಡೆಸಿದ ನಂತರ ಶವವನ್ನು ವಾರಸುದಾರರಿಗೆ ಒಪ್ಪಿಸಿದ್ದು ಸಂಜೆ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಿತು. ಜೀವನದಲ್ಲಿ ಜಿಗುಪ್ಸೆಯೇ ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net