ಹೃದಯಾಘಾತಕ್ಕೆ ಚಾಲಕ ಸಾವು

Heart Attack
Published on

ಲಕ್ಷ್ಮೇಶ್ವರ: ಪಟ್ಟಣದ ಸಾರಿಗೆ ಸಂಸ್ಥೆಯ ಚಾಲಕ ಎಸ್.ಪಿ. ಲಕ್ಷ್ಮಣ(53) ತೀವ್ರ ಹೃದಯಾಘಾತದಿಂದ ಮಂಗಳವಾರ ಸಾವನ್ನಪ್ಪಿದ್ದಾರೆ.

ಅವರಿಗೆ ಮಂಗಳವಾರ ಸಂಜೆ ಎದೆ ನೋವು ಕಾಣಿಸಿಕೊಂಡಿತ್ತು. ಕೂಡಲೇ ಸ್ಥಳೀಯ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ಕೊಡಿಸಿ, ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಅವರು ತಾಲೂಕಿನ ಗೋವಿನಕೊಪ್ಪ ಗ್ರಾಮದವರಾಗಿದ್ದು, 24 ವರ್ಷಗಳಿಂದ ಸಾರಿಗೆ ಸಂಸ್ಥೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಸತತ 15 ವರ್ಷಗಳ ಕಾಲ ಅಪಘಾತ ರಹಿತ ಚಾಲನೆಗಾಗಿ ಮುಖ್ಯಮಂತ್ರಿಗಳ ಬಂಗಾರದ ಪದಕಕ್ಕೆ ಭಾಜನರಾಗಿದ್ದರು. ಅಪ್ಪಟ ಕನ್ನಡ ಪ್ರೇಮಿಯೂ ಆಗಿದ್ದ ಅವರು ಪ್ರತಿವರ್ಷ ರಾಜ್ಯೋತ್ಸವದಂದು ಬಸ್‌ಅನ್ನು ಕನ್ನಡದ ತೇರನ್ನಾಗಿ ಸಿಂಗರಿಸುತ್ತಿದ್ದರು.

ಅವರಿಗೆ ಪತ್ನಿ, ಪುತ್ರ, ಇಬ್ಬರು ಪುತ್ರಿಯರು ಇದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net