

ಕುಂದಾಪುರ: ಮುಳ್ಳಿಕಟ್ಟೆ ಸಮೀಪದ ಮೂವತ್ತುಮುಡಿ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕುಂದಾಪುರ ಕಡೆಯಿಂದ ಬೈಂದೂರು ಕಡೆಗೆ ಸಾಗುತ್ತಿದ್ದ ಲಾರಿಗೆ ಅದೇ ಮಾರ್ಗದಲ್ಲಿ ಸಾಗುತ್ತಿದ್ದ ಇನ್ನೊಂದು ಲಾರಿ ಹಿಂಬದಿಗೆ ಶುಕ್ರವಾರ ಡಿಕ್ಕಿ ಹೊಡೆದಿದೆ.
ಅಪಘಾತದಲ್ಲಿ ಲಾರಿ ಚಾಲಕ ಗಂಭೀರ ಗಾಯಗೊಂಡಿದ್ದು, ಕುಂದಾಪುರದ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಕುಂದಾಪುರ ಸಂಚಾರಿ ಠಾಣೆ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ, ರಾಷ್ಟ್ರೀಯ ಹೆದ್ದಾರಿ ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.