

ನಿಪ್ಪಾಣಿ: ಶಾಸಕಿ ಶಶಿಕಲಾ ಜೊಲ್ಲೆ ಮತ್ತು ಸಂಸದ ಅಣ್ಣಾಸಾಹೇಬ ಜೊಲ್ಲೆ ನೇತೃತ್ವದಲ್ಲಿ ಕ್ಷೇತ್ರದ ಸರ್ವಾಂಗೀಣ ಪ್ರಗತಿಯತ್ತ ಮುನ್ನಡೆಯುತ್ತಿದೆ ಎಂದು ನಗರಸಭೆ ಸ್ಥಾಯಿ ಸಮೀತಿ ಮಾಜಿ ಚೇರ್ಮನ್ ರಾಜೇಂದ್ರ ಗುಂಡೇಶಾ ಹೇಳಿದರು.
ಶಿರಗುಪ್ಪಿ ಗ್ರಾಮದಲ್ಲಿ ಶಾಸಕಿ ಶಶಿಕಲಾ ಜೊಲ್ಲೆ ಪ್ರಯತ್ನದಿಂದ ಕರ್ನಾಟಕ ನೀರಾವರಿ ನಿಗಮದ ಎಸ್‌ಸಿಪಿ/ಟಿಎಸ್‌ಪಿ ಯೋಜನೆಯಡಿ ಮಂಜೂರಾದ 30 ಲಕ್ಷ ರೂ. ಅನುದಾನದ ರಸ್ತೆ ಮತ್ತು ಚರಂಡಿ ಕಾಮಗಾರಿಯನ್ನು ಮಂಗಳವಾರ ಉದ್ಘಾಟಿಸಿ ಮಾತನಾಡಿದರು.
ಗುಣಮಟ್ಟದ ರಸ್ತೆಗಳು ಮತ್ತು ಇತರ ಮೂಲಸೌಲಭ್ಯ ಕಲ್ಪಿಸಲು ಶ್ರಮಿಸಲಾಗುತ್ತಿದೆ ಎಂದರು. ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆ ಉಪಾಧ್ಯಕ್ಷ ಎಂ.ಪಿ. ಪಾಟೀಲ, ಪ್ರಕಾಶ ಶಿಂಧೆ, ಪ್ರಣವ ಮಾನವಿ, ಬಂಡಾ ಘೋರ್ಪಡೆ, ಶಿರಗುಪ್ಪಿ ಗ್ರಾಪಂ ಉಪಾಧ್ಯಕ್ಷ ಆನಂದ ಕುಂಬಾರ, ಸದಸ್ಯರಾದ ಸದಾಶಿವ ಪಾಟೀಲ, ಬಾಳು ದೇವಡ್ಕರ ಇತರರಿದ್ದರು.