ನಿಖರ ದಾಖಲೆ ಪಡೆಯಲು ಡ್ರೋನ್ ಸರ್ವೇ

10 HANUR 2
??????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
Published on

ಹನೂರು: ಇ-ಸ್ವತ್ತು ಸಮಸ್ಯೆಯಿಂದ ಮುಕ್ತಿ ಹೊಂದಲು ಹಾಗೂ ನಿಖರವಾದ ದಾಖಲೆ ಪಡೆಯುವ ಸಲುವಾಗಿ ವಸತಿ ಪ್ರದೇಶಗಳನ್ನು ಡ್ರೋನ್ ಮೂಲಕ ಸರ್ವೇ ಕಾರ್ಯ ನಡೆಸಲು ಜಾರಿಗೊಳಿಸಿರುವ ಸ್ವಾಮಿತ್ವ ಯೋಜನೆಯ ಪ್ರಯೋಜನವನ್ನು ಪ್ರತಿಯೊಬ್ಬರೂ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಶಾಸಕ ಎಂ.ಆರ್ ಮಂಜುನಾಥ್ ತಿಳಿಸಿದರು.

ತಾಲೂಕಿನ ಭೈರನತ್ತ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ಶುಕ್ರವಾರ ಸ್ವಾಮಿತ್ವ ಯೋಜನೆಯ ಅನುಷ್ಠಾನ ಸಂಬಂಧ ಆಯೋಜಿಸಿದ್ದ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

ಈ ಹಿಂದೆ ಕಂದಾಯ ಇಲಾಖೆ ತೆರಿಗೆ ವಸೂಲು ಮಾಡುವ ಸಲುವಾಗಿ ವಸತಿ ಪ್ರದೇಶಗಳನ್ನು ಗುರುತಿಸಿ ದಾಖಲಿಸಿತ್ತು. ಆದರೆ ವಸತಿ ಪ್ರದೇಶಗಳಿಗೆ ಹೆಚ್ಚಿನ ಒತ್ತು ನೀಡಿ ಸರ್ವೇ ಕಾರ್ಯ ನಡೆಸಿ ನಿಖರವಾದ ದಾಖಲೆಗಳನ್ನು ಸಂಗ್ರಹ ಮಾಡಿರಲಿಲ್ಲ. ಬಳಿಕ ಇ-ಸ್ವತು ಮೂಲಕ ನಿಖರ ಆಸ್ತಿ ವಿವರವನ್ನು ಹೊಂದುವಂತಾಯಿತು. ಆದರೂ ಆಸ್ತಿ ಬದಲಾವಣೆ ಹಾಗೂ ಸರ್ಕಾರದಿಂದ ಸಿಗುವ ಸಲವತ್ತುಗಳನ್ನು ಪಡೆದುಕೊಳ್ಳಲು ತುಂಬ ಸಮಸ್ಯೆಯಾಗಿತ್ತು. ಹಾಗಾಗಿ ಇ-ಸ್ವತ್ತಿನ ಸಮಸ್ಯೆಯನ್ನು ಬಗೆಹರಿಸುವ ಸಲುವಾಗಿ ವಿನೂತನ ಸ್ವಾಮಿತ್ವ ಯೋಜನೆ ಜಾರಿಯಾಗಿದೆ. ಈಗಾಗಲೇ ಅಜ್ಜೀಪುರ, ಕೌದಳ್ಳಿ ಹಾಗೂ ಮ.ಬೆಟ್ಟ ಗ್ರಾಪಂ ವ್ಯಾಪ್ತಿಯಲ್ಲಿ ಅನುಷ್ಠಾನಗೊಳಿಸಲಾಗಿದೆ. ಮುಂದಿನ ದಿನಗಳಲ್ಲಿ ಎಲ್ಲ ಗ್ರಾಮಗಳಿಗೂ ವಿಸ್ತರಿಸುವ ಉದ್ದೇಶವಿದೆ ಎಂದರು.

ಈ ಯೋಜನೆಯಡಿ ವಸತಿ ಪ್ರದೇಶಗಳನ್ನು ಡ್ರೋನ್ ಮೂಲಕ ಕಂದಾಯ ಹಾಗೂ ಗ್ರಾಪಂ ಸಿಬ್ಬಂದಿ ತಂಡದಿಂದ ಸರ್ವೇ ಕಾರ್ಯ ನಡೆಸಲಾಗುತ್ತದೆ. ಆದ್ದರಿಂದ ಈ ವೇಳೆ ಪ್ರತಿಯೊಬ್ಬರೂ ಸ್ಥಳದಲ್ಲಿದ್ದು ಅಗತ್ಯ ಮಾಹಿತಿ ನೀಡುವುದರ ಮೂಲಕ ಸಹಕಾರ ನೀಡಬೇಕು. ಇದರಿಂದ ಸಂಪೂರ್ಣ ಆಸ್ತಿ ವಿವರವನ್ನು ಹೊಂದಿದ ನಿಖರ ದಾಖಲೆಯುಳ್ಳ ಪಿಆರ್ ಕಾರ್ಡ್ ನೀಡಲಾಗುತ್ತದೆ. ಇದು ಸರ್ಕಾರದ ಸವಲತ್ತುಗಳನ್ನು ಪಡೆದುಕೊಳ್ಳಲು ಮುಖ್ಯ ಶಾಶ್ವತ ದಾಖಲೆಯಾಗಿರುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ಈ ಯೋಜನೆಯ ಪ್ರಯೋಜನ ಪಡೆದುಕೊಂಡು ನಿಖರವಾದ ದಾಖಲೆ ಹೊಂದಬೇಕು ಎಂದರು.

ಇದೇ ಗ್ರಾಮದ ಮಹಿಳೆಯರು ಗ್ರಾಮದಲ್ಲಿ ತಲೆದೋರಿರುವ ಸಮಸ್ಯೆಯನ್ನು ಬಗೆಹರಿಸುವಂತೆ ಹಾಗೂ ಅಗತ್ಯ ಮೂಲ ಸೌಕರ್ಯ ಒದಗಿಸುವಂತೆ ಮನವಿ ಮಾಡಿದರು. ಈ ಬಗ್ಗೆ ಶಾಸಕರು ಅಧಿಕಾರಿಗಳಿಂದ ಮಾಹಿತಿ ಪಡೆದು ಮಾತನಾಡಿ, ಈಗಾಗಲೇ ರಾಮನಗುಡ್ಡೆ ಡ್ಯಾಂಗೆ ನದಿ ಮೂಲದಿಂದ ನೀರು ತುಂಬಿಸಲು ಕ್ರಮವಹಿಸಲಾಗಿದ್ದು, ಈ ಕಾರ್ಯ ಶೀಘ್ರವಾಗಿ ಆಗಲಿದೆ. ಆದ್ದರಿಂದ ಮುಂದಿನ ದಿನಗಳಲ್ಲಿ ಈ ಭಾಗದ ಹಳ್ಳಕ್ಕೂ ನೀರು ಹರಿಸುವುದರ ಮೂಲಕ ಅಂತರ್ಜಲ ಮಟ್ಟ ವೃದ್ಧಿಯಾಗಲಿದ್ದು, ನೀರಿನ ಸಮಸ್ಯೆ ನೀಗಲಿದೆ. ಇನ್ನು ತಾಲೂಕು ಕೇಂದ್ರದಲ್ಲಿ 100 ಹಾಸಿಗೆಯುಳ್ಳ ಆಸ್ಪತ್ರೆ, ಮಿನಿ ವಿಧಾನಸೌಧ ಹಾಗೂ ವಿವಿಧ ಇಲಾಖೆಗಳ ಕಚೇರಿಗೆ ಸ್ಥಾಪನೆಗೆ ಅಗತ್ಯ ಕ್ರಮವಹಿಸಲಾಗಿದೆ ಎಂದು ತಿಳಿಸಿದರು.

ಚಾಮುಲ್ ನಿರ್ದೇಶಕ ಉದ್ದನೂರು ಪ್ರಸಾದ್, ಮಾಜಿ ಅಧ್ಯಕ್ಷ ಗುರುಮಲ್ಲಪ್ಪ, ಪಿಎಸಿಸಿ ನಿರ್ದೇಶಕ ಮಂಜೇಶ್, ಗ್ರಾಪಂ ಅಧ್ಯಕ್ಷ ಸೋಮಶೇಖರ್, ಸದಸ್ಯರಾದ ರಾಚಪ್ಪ, ಲತಾ, ಮಹದೇವು, ತಾಪಂ ಇಒ ಉಮೇಶ್, ಭೂ ಮಾಪನ ಇಲಾಖೆಯ ಸಹಾಯಕ ನಿರ್ದೇಶಕ ನಟರಾಜು, ತಾಲೂಕು ಸರ್ವೇಯರ್ ಶ್ರೀನಿವಾಸಮೂರ್ತಿ, ಪಿಡಿಒ ರಾಮು, ಕಾರ್ಯದರ್ಶಿ ನಾಗರಾಜಮೂರ್ತಿ ಇನ್ನಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net