

ರಾಯಚೂರು: ಲಖೀಂಪುರ ಖೇರಿ ರೈತರ ಹತ್ಯಾಕಾಂಡದ ಸಂಚುಕೋರ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾರನ್ನು ಸಚಿವ ಸಂಪುಟದಿಂದ ಕೈಬಿಡುವಂತೆ ಒತ್ತಾಯಿಸಿ ಸ್ಥಳೀಯ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಸಂಯುಕ್ತ ಹೋರಾಟ ಕರ್ನಾಟಕದಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.
ನಂತರ ಜಿಲ್ಲಾಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಕಾರಿ ಮಹ್ಮದ್ ಆಸ್ೀಗೆ ಮನವಿ ಸಲ್ಲಿಸಿ, ರೈತರ ಹತ್ಯಾಕಾಂಡದ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು. ಅಜಯ್ ಮಿಶ್ರಾರನ್ನು ಕೂಡಲೇ ಬಂಸಬೇಕು ಎಂದು ಒತ್ತಾಯಿಸಿದರು.
ವಿದ್ಯುತ್ ತಿದ್ದುಪಡಿ ಮಸೂದೆಯ 2022 ಮತ್ತು ಕಾರ್ಮಿಕ ಸಂಹಿತೆಗಳನ್ನು ರದ್ದುಪಡಿಸಬೇಕು. ದೆಹಲಿ ಹೋರಾಟದ ಸಂದರ್ಭದಲ್ಲಿ ಹೋರಾಟಗಾರರ ಮೇಲೆ ಹಾಕಿರುವ ಮೊಕದ್ದಮೆಗಳನ್ನು ವಾಪಸ್ ಪಡೆಯಬೇಕು. ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ಪಡಿಸಬೇಕು.
ಪ್ರತಿಯೊಂದು ದುಡಿಮೆಗೂ ಮಾಸಿಕ 26 ಸಾವಿರ ರೂ. ಕನಿಷ್ಠ ವೇತನ ನಿಗದಿಪಡಿಸಬೇಕು. ರೈತರ ಸಾಲ ಮನ್ನಾ ಮಾಡಬೇಕು. ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣ ನಿಲ್ಲಿಸಬೇಕು. ಉದ್ಯೋಗ ಖಾತ್ರಿ ಯೋಜನೆಯಡಿ ಕನಿಷ್ಠ 200 ದಿನಗಳ ಉದ್ಯೋಗ ಒದಗಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಪ್ರತಿಭಟನೆಯಲ್ಲಿ ಸಂಘಟನೆ ಪದಾಕಾರಿಗಳಾದ ಪ್ರಭಾಕರ್ ಪಾಟೀಲ್, ಎಸ್.ಮಾರೆಪ್ಪ, ಕೆ.ಜಿ.ವೀರೇಶ, ಡಿ.ಎಸ್.ಶರಣಬಸವ, ಎಚ್.ಪದ್ಮಾ, ಬೂದಯ್ಯಸ್ವಾಮಿ, ಮಲ್ಲಣ್ಣ ದಿನ್ನಿ, ಖಾಜಾ ಅಸ್ಲಂ, ಶ್ರೀನಿವಾಸ ಕೊಪ್ಪರ ಪಾಲ್ಗೊಂಡಿದ್ದರು.