ವಾರದೊಳಗೆ ಬರ ಘೋಷಣೆ

KRISHNE BAIREGOWDA.
Published on

ಚಿತ್ರದುರ್ಗ: ಕೇಂದ್ರ ಸರ್ಕಾರದ ಮಾರ್ಗಸೂಚಿ ಅನ್ವಯ ಮೊದಲ ಸುತ್ತಿನ ಸಮೀಕ್ಷೆ ಪ್ರಕಾರ 62 ತಾಲೂಕು ಬರ ಪಟ್ಟಿಗೆ ಸೇರಿದ್ದು, ಈ ಸಂಬಂಧ ವಾರದೊಳಗೆ ಬರ ಘೋಷಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಇನ್ನುಳಿದ 51 ತಾಲೂಕುಗಳಲ್ಲೂ ಸಮೀಕ್ಷೆ ನಡೆಸಲಾಗುತ್ತಿದೆ. ವರದಿ ಆಧರಿಸಿ ಅವುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ತೀರ್ಮಾನಿಸಲಾಗುವುದು ಎಂದರು.

ಮಳೆ ಕೊರೆತೆ ಇರುವ ತಾಲೂಕುಗಳಲ್ಲಿ ಆ.18ರಂದು ಸಮೀಕ್ಷೆ ನಡೆಸಲಾಗಿದೆ. ಮತ್ತೊಮ್ಮೆ ಸಮೀಕ್ಷೆ ಕೈಗೊಳ್ಳಲಾಗಿದೆ. ಎಲ್ಲಿ ಬರವಿದೆ ಅಲ್ಲಿ ಎಂಎಲ್‌ಎ ಅಧ್ಯಕ್ಷತೆಯಲ್ಲಿ ಟಾಸ್ಕ್ ಫೋರ್ಸ್ ಸಮಿತಿ ರಚಿಸಲಾಗುವುದು. ಮೇವಿನ ಕೊರತೆ ಆಗಬಾರದು ಎಂಬ ಕಾರಣಕ್ಕೆ 20 ಕೋಟಿ ರೂ. ವೆಚ್ಚದಲ್ಲಿ ರೈತರಿಗೆ ಉಚಿತ ಮೇವಿನ ಬೀಜ ನೀಡಲಾಗುವುದು. ರೈತರ ಹಿತ ಕಾಯಲು ಸರ್ಕಾರ ಬದ್ಧವಾಗಿದೆ ಎಂದು ಪ್ರತಿಕ್ರಿಯಿಸಿದರು.

ಜನರ ಭಾವನೆಗಳ ಜತೆ ಚೆಲ್ಲಾಟ ಆಡುವುದು ಸರಿಯಲ್ಲ. ಇದರಿಂದ ದೇಶ ಉದ್ಧಾರ ಆಗೋಲ್ಲ. ಬಡವರನ್ನು ಮತಕ್ಕಾಗಿ ದುರುಪಯೋಗ ಪಡಿಸಿಕೊಳ್ಳುವ ಕೆಟ್ಟ ರಾಜಕೀಯ ವ್ಯವಸ್ಥೆಗೆ ಕೊನೆಗಾಲ ಸಮೀಪಿಸುತ್ತಿದೆ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net