ಜಿಲ್ಲೆಯಲ್ಲಿ ಕೇಂದ್ರ ತಂಡದಿ೦ದ ಬರ ಅಧ್ಯಯನ ನಾಳೆ

Untitled
Published on

ಧಾರವಾಡ: ರಾಜ್ಯದ ಬರ ಪರಿಸ್ಥಿತಿ ಅಧ್ಯಯನಕ್ಕೆ ಕೇಂದ್ರದ ೩ ತಂಡಗಳು ರಾಜ್ಯಕ್ಕೆ ಆಗಮಿಸುತ್ತಿವೆ. ಅ. 6ರಿಂದ ವಿವಿಧ ಜಿಲ್ಲೆಗಳ ಪ್ರವಾಸ ಕೈಗೊಂಡು ಪರಿಶೀಲನೆ ನಡೆಸಲಿವೆ. 10 ಅಧಿಕಾರಿಗಳನ್ನೊಳಗೊಂಡ ತಂಡಗಳು ರಾಜ್ಯದ ಸ್ಥಳೀಯ ಅಽಕಾರಿಗಳೊಂದಿಗೆ ಕೃಷಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಲಿವೆ.

ಧಾರವಾಡ ಜಿಲ್ಲಾ ಪ್ರವಾಸ: ಅ. 7ರಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯದ ಜಂಟಿ ಕಾರ್ಯದರ್ಶಿ, ಹಿರಿಯ ಐಎಎಸ್ ಅಧಿಕಾರಿ ಅಜಿತ್‌ಕುಮಾರ್ ಸಾಹು ನೇತೃತ್ವದಲ್ಲಿ ಜಿಲ್ಲೆಯ ಬರ ಅಧ್ಯಯನ ನಡೆಯಲಿದೆ. ಎಣ್ಣೆ ಬೀಜಗಳ ಅಭಿವೃದ್ಧಿ ಇಲಾಖೆಯ ನಿರ್ದೇಶಕ ಡಾ. ಜೆ. ಪೊನ್ನುಸ್ವಾಮಿ, ವೆಚ್ಚ ವ್ಯವಹಾರಗಳ ಇಲಾಖೆಯ ಸಹಾಯಕ ನಿರ್ದೇಶಕ ಮಹೇಂದ್ರ ಚಂಡೇಲಿಯ, ನೀತಿ ಆಯೋಗದ ಸಂಶೋಧನಾಽಕಾರಿ ಶಿವಚರಣ್ ಮೀನಾ, ರಾಜ್ಯ ಕೃಷಿ ಆಯುಕ್ತ, ಐಎಎಸ್ ಅಽಕಾರಿ ಎಸ್. ಪಾಟೀಲ ಅವರನ್ನು ಒಳಗೊಂಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net