ನಾಳೆ ಬರ ಅಧ್ಯಯನ ತಂಡ ಆಗಮನ

Dry season in a corn field.
Dry season in a corn field.
Published on

ಹೊಸಪೇಟೆ: ವಿಜಯನಗರ ಜಿಲ್ಲೆಯ ಬರ ಪರಿಸ್ಥಿತಿ ಅಧ್ಯಯನಕ್ಕೆ ಐಎಎಸ್ ಅಧಿಕಾರಿಗಳನ್ನು ಒಳಗೊಂಡ ಕೇಂದ್ರದ ತಂಡ ಶನಿವಾರ ಜಿಲ್ಲೆಗೆ ಆಗಮಿಸಲಿದೆ.

ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ಘೋಷಿಸಲಾಗಿದ್ದು, ಬರ ಅಧ್ಯಯನದ ಎರಡನೇ ತಂಡವಾದ ಕೇಂದ್ರ ಕುಡಿಯುವ ನೀರು ಹಾಗೂ ಸ್ವಚ್ಛತಾ ಸಚಿವಾಲಯದ ಹೆಚ್ಚುವರಿ ಸಲಹೆಗಾ ರರಾದ ಡಿ. ರಾಜಶೇಖರ್ ನೇತೃತ್ವದಲ್ಲಿ ಪಶುಸಂಗೋಪನೆ ಇಲಾಖೆ ನಿರ್ದೇಶಕ ಆರ್.ಥಾಕರೆ, ಗ್ರಾಮೀಣಾಭಿವೃದ್ಧಿ ಇಲಾಖೆಯ ಸಹಾಯಕ ಆಯುಕ್ತ ಮೋತಿರಾಂ, ರಾಜ್ಯದ ಪ್ರಕೃತಿ ವಿಕೋಪ ನಿರ್ವಹಣಾ ಕೇಂದ್ರದ ನಿರ್ದೇಶಕ ಕರೀಗೌಡ ಅವರ ನೇತೃತ್ವದ ತಂಡ ವಿವಿಧ ತಾಲ್ಲೂಕಿಗೆ ಭೇಟಿ ನೀಡಲಿದ್ದಾರೆ. ಕಂದಾಯ, ಕೃಷಿ, ತೋಟಗಾರಿಕೆ ಇಲಾಖೆ ಅಧಿಕಾರಿಗಳು ಈ ಸಾಲಿನ ಮಳೆಯ ವಾಸ್ತವ ಪರಿಸ್ಥಿತಿ ಬರ ಅಧ್ಯಯನ ನಡೆಸಲಿದೆ.

ಅ.೭ರ ಶನಿವಾರ ಕಮಲಾಪುರದ ಮಯೂರ ಭುವನೇಶ್ವರಿ ಹೋಟೆಲ್‌ನಲ್ಲಿ ಬರ ಪರಿಸ್ಥಿತಿಯ ಸಂಕ್ಷಿಪ್ತ ವಿವರ ಪಡೆಯಲಿದ್ದಾರೆ. ಹೊಸಪೇಟೆ ತಾಲೂಕಿನ ನಂದಿಬAಡಿ, ಹಗರಿಬೊಮ್ಮನಹಳ್ಳಿ ತಾಲೂಕಿನ ನಾರಾಯಣ ದೇವರಕೆರೆ, ಹಂಪಾಪಟ್ಟಣ, ರಾಯರ ತಾಂಡಾ, ಆನೆಕಲ್, ಮಾದೂರು, ಕೊಟ್ಟೂರು ತಾಲ್ಲೂಕಿನ ತಿಮ್ಮಲಾಪುರ ನಂತರ ಕೂಡ್ಲಿಗಿ ತಾಲ್ಲೂಕಿನ ಈಚಲುಬೊಮ್ಮನಹಳ್ಳಿ ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ. ಇದೇ ವೇಳೆ ರೈತರೊಂದಿಗೆ ಮಾತುಕತೆ ನಡೆಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net