ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮ ಕಾರ್ಯಕ್ರಮ

hbr (5)
Published on

ವಿಜಯವಾಣಿ ಸುದ್ದಿಜಾಲ ಹೆಬ್ರಿ

ಮಾದಕ ದ್ರವ್ಯ ಸೇವನೆಯಿಂದ ಯುವ ಜನತೆಯ ಸರ್ವತೋಮುಖ ಬೆಳವಣಿಗೆಗೆ ಮಾರಕವಾಗುತ್ತದೆ. ದೇಶದ ಬೆಳವಣಿಗೆಯಲ್ಲಿ ಯುವ ಜನತೆಯ ಪಾತ್ರ ಬಹುಮುಖ್ಯ, ವಿದ್ಯಾರ್ಥಿ ದೆಸೆಯಲ್ಲಿ ಎಲ್ಲ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ಬಳಕೆಯ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ತಿಳಿದಿರಬೇಕಾದುದು ಬಹುಮುಖ್ಯ ಎಂದು ಹೆಬ್ರಿ ಪಿ.ಎಸ್.ಐ.ಮಹಾಂತೇಶ ಜಾಬಗೌಡ ಹೇಳಿದರು.

ಹೆಬ್ರಿಯ ಎಸ್.ಆರ್.ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾಹಿತಿ ನೀಡಿದರು.

ನಶಾ ಮುಕ್ತ ಭಾರತದ ನಿರ್ಮಾಣದ ಪ್ರಯುಕ್ತ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿಯನ್ನು ಪಿ.ಎಸ್.ಐ ಮಹಾಂತೇಶ ಜಾಬಗೌಡ ಬೋಧಿಸಿದರು.

ಕಾರ್ಯದರ್ಶಿ ಸಪ್ನಾ ಎನ್.ಶೆಟ್ಟಿ, ಪ್ರಾಂಶುಪಾಲ ಪ್ರಶಾಂತ್, ಮುಖ್ಯಶಿಕ್ಷಕ ಗೋಪಾಲ ಆಚಾರ್ಯ, ಉಪ ಪ್ರಾಂಶುಪಾಲ ದೀಪಕ್. ಎನ್.ಉಪಸ್ಥಿತರಿದ್ದರು. ಭೌತಶಾಸ್ತ್ರ ಉಪನ್ಯಾಸಕ ಪ್ರಶಾಂತ್ ಗೋಖಲೆ ನಿರೂಪಿಸಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net