ಡ್ರಗ್ಸ್​ ಮಾರಾಟ ಮಾಡುತ್ತಿದ್ದ ನಾಲ್ವರು ಸಿಸಿಬಿ ಬಲೆಗೆ: ಲಕ್ಷಾಂತರ ರೂ. ಮೌಲ್ಯದ ಮಾದಕವಸ್ತು ವಶ

drug case
Published on

ಬೆಂಗಳೂರು: ಡ್ರಗ್ಸ್​ ಪೆಡ್ಲಿಂಗ್‌ನಲ್ಲಿ ತೊಡಗಿದ್ದ ನಾಲ್ವರನ್ನು ಸಿಸಿಬಿ ಪೊಲೀಸರು ಬಂಧಿಸಿ ಲಕ್ಷಾಂತರ ರೂ. ಮೌಲ್ಯದ ಮಾದಕವಸ್ತು ವಶ ಪಡಿಸಿಕೊಂಡಿದ್ದಾರೆ.

ಯಶವಂತ್​, ರೋಹನ್​ ಜೋಜೋ, ಶಾಲ್ಬಿನ್​, ಜಿತಿನ್​ ಎಂ.ಎಸ್​. ಬಂಧಿತರು. ಇವರಿಂದ ಸುಮಾರು 4.5 ಲಕ್ಷ ರೂ. ಬೆಲೆ ಬಾಳುವ ಮಾದಕ ವಸ್ತುಗಳಾದ 60 ಗ್ರಾಂ ಎಂ.ಡಿ.ಎಂ.ಎ. ಕ್ರಿಸ್ಟೆಲ್, 2 ಕೆಜಿ ಗಾಂಜಾ, 5 ಮೊಬೈಲ್ ವಶ ಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳು ಕೇರಳ ಮೂಲದ ವ್ಯಕ್ತಿಯನ್ನು ವಿಕರ್ ಮಿ ಆ್ಯಪ್​ನಲ್ಲಿ ಸಂಪರ್ಕಿಸಿ ಆತನಿಂದ ಕಡಿಮೆ ಬೆಲೆಗೆ ನಿಷೇಧಿತ ಮಾದಕ ವಸ್ತುಗಳನ್ನು ಖರೀದಿಸಿ ಅವುಗಳನ್ನು ಕಾಲೇಜು ವಿದ್ಯಾರ್ಥಿಗಳಿಗೆ, ಐಟಿ-ಬಿಟಿ ಉದ್ಯೋಗಿಗಳಿಗೆ ಹಾಗೂ ಪರಿಚಯವಿರುವ ಗ್ರಾಹಕರಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಅಕ್ರಮವಾಗಿ ಹಣ ಸಂಪಾದನೆಯಲ್ಲಿ ತೊಡಗಿರುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.

ಈ ಆರೋಪಿಗಳಿಗೆ ಮಾದಕ ವಸ್ತುಗಳನ್ನು ಸರಬರಾಜು ಮಾಡುತ್ತಿದ್ದ ಮತ್ತೊಬ್ಬ ಆರೋಪಿ ತಲೆಮರೆಸಿಕೊಂಡಿದ್ದು ಆತನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ಧ ಮೈಕೋಲೇಔಟ್ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net