ಮಾದಕ ವಸ್ತು ಮಾರಾಟ ಮಾಡುತ್ತಿದ್ದವನ ಬಂಧನ

05 gkp 06
ಅಬ್ದುಲ್ ಮಜೀದ್
Published on

ಗೋಣಿಕೊಪ್ಪ: ಮಾದಕ ವಸ್ತು ಮಾರಾಟ ಮಾಡುತ್ತಿದ್ದವನನ್ನು ಬಂಧಿಸಿರುವ ಜಿಲ್ಲಾ ಪೊಲಿಸರು, ಬಂಧಿತನಿಂದ 300ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ.

ಸದ್ಯ ಕಡಂಗಮರೂರು ಗ್ರಾಮದ ನಿವಾಸಿ ಹಾಗೂ ಅಸ್ಸಾಂ ರಾಜ್ಯ ಮೂಲದ ಅಬ್ದುಲ್ ಮಜೀದ್ (31) ಬಂಧಿತ. ಕಡಂಗಮರೂರು-ಬೊಳ್ಳುಮಾಡು ಜಂಕ್ಷನ್ ಬಳಿ ನಿಷೇಧಿತ ಮಾದಕ ವಸ್ತು ಮಾರಾಟ ಮಾಡುತ್ತಿರುವ ಕುರಿತು ಮಂಗಳವಾರ ಖಚಿತ ಮಾಹಿತಿ ಪಡೆದ ಪೊಲೀಸರು, ದಾಳಿ ನಡೆಸಿ ಮಜೀದ್‌ನನ್ನು ಮಾಲು ಸಮೇತ ವಶಕ್ಕೆ ಪಡೆದಿದ್ದಾರೆ.

ವಿರಾಜಪೇಟೆ ಉಪ ವಿಭಾಗದ ಡಿವೈಎಸ್‌ಪಿ ಆರ್.ಮೋಹನ್‌ಕುಮಾರ್, ವಿರಾಜಪೇಟೆ ವೃತ್ತ ಸಿಪಿಐ ಬಿ.ಎಸ್.ಶಿವರುದ್ರ, ಪಿಎಸ್‌ಐ ಸಿ.ಸಿ.ಮಂಜುನಾಥ, ಬಿ.ಎಸ್.ವಾಣಿಶ್ರೀ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net