ಯುವ ಶಕ್ತಿ ಸದ್ಭಳಕೆಗೆ ಮಾದಕ ವ್ಯಸನ ಸವಾಲು

udp-12-redcross
Published on

ಉಡುಪಿ: ದೇಶದಲ್ಲಿ ಅಪಾರವಾಗಿರುವ ಯುವ ಶಕ್ತಿ ಸದ್ಭಳಕೆಗೆ ಮಾದಕ ವ್ಯಸನ ಸವಾಲಾಗಿದ್ದು, ಇದರಿಂದ ಮಾದಕ ವ್ಯಸನದ ವಿರುದ್ಧ ಅಂದೋಲನವನ್ನು ಪ್ರತಿಯೊಬ್ಬ ವ್ಯಕ್ತಿಯ ಅಂತರಂಗಕ್ಕೂ ಮುಟ್ಟಿಸಬೇಕಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹೇಳಿದರು.

ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯದ ನಿರ್ದೇಶನದಂತೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಭಾರತೀಯ ರೆಡ್​ ಕ್ರಾಸ್​, ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ, ಅಜ್ಜರಕಾಡು ಡಾ. ಜಿ. ಶಂಕರ್​ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಶ್ರಯದಲ್ಲಿ ಅಜ್ಜರಕಾಡು ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನಶಾ ಮುಕ್ತ ಭಾರತ ಅಭಿಯಾನ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.

ಮುಖ್ಯ ಅತಿಥಿಗಳಾಗಿ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ. ಎಸ್​., ಹೆಚ್ಚುವರಿ ಪೋಲಿಸ್​ ಅಧೀಕ್ಷಕ ಎಸ್​. ಟಿ. ಸಿದ್ಧಲಿಂಗಪ್ಪ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಐ.ಪಿ. ಗಡಾದ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ, ವಿಕಲಚೇತನರ ಕಲ್ಯಾಣಾಧಿಕಾರಿ ರತ್ನಾ, ರೆಡ್​ ಕ್ರಾಸ್​ ಉಪಸಭಾಪತಿ ಡಾ. ಅಶೋಕ್​ ಕುಮಾರ್​ ವೈ.ಜಿ., ಡಾ.ಜಿ. ಶಂಕರ್​ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಾಂಶುಪಾಲ ಡಾ. ಭಾಸ್ಕರ ಶೆಟ್ಟಿ ಎಸ್​., ರೆಡ್​ ಕ್ರಾಸ್​ ಆಡಳಿತ ಮಂಡಳಿ ಸದಸ್ಯ ಚಂದ್ರಶೇಖರ್​, ಗೌರವ ಖಜಾಂಚಿ ರಮಾದೇವಿ, ನೋಡಲ್​ ಅಧಿಕಾರಿ ಜಯಶ್ರೀ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net