

ಚಿಂಚೋಳಿ: ಪಟ್ಟಣದ ಪ್ರಮುಖ ಬೀದಿಗಳಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಪುರಸಭೆ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಶ್ರೀ ಮ.ನಿ.ಪ್ರ ಡಾ.ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ನಿಮಿತ್ತವಾಗಿ ವ್ಯಸನ ಮುಕ್ತ ದಿನಾಚರಣೆ ಅಂಗವಾಗಿ ಬೃಹತ್ ಜಾಗೃತಿ ಜಾಥಾ ನಡೆಸಿದರು. ತಹಸಿಲ್ದಾರ್ ಸುಬ್ಬಣ್ಣ ಜಮಖಂಡಿ, ತಾ.ಪಂ ಇಓ ಶಂಕರ ರಾಠೋಡ, ಕ್ಷೇತ್ರ ಶಿಕ್ಷಣಾಧಿಕಾರಿ ನಾಗಶೇಟ್ಟಿ ಭದ್ರಶೇಟ್ಟಿ, ಪುರಸಭೆ ಮುಖ್ಯಾಧಿಕಾರಿ ಕಾಶಿನಾಥ್ ಧನ್ನಿ, ವೆಂಕಟೇಶ್ ದುಗ್ಗನ್, ಮಲ್ಲಿಕಾರ್ಜುನ ಪಾಲಾಮೂರ, ಡಾ.ಮಹ್ಮದ ಗಫಾರ್, ದೇವಿದಾಸ ರಾಠೋಡ ಸೇರಿದಂತೆ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.