ಮಾದಕ ವಸ್ತು ಮಾರಾಟ: ಆರೋಪಿಗಳ ಬಂಧನ

jabiya ullakhan
Published on

ಮಡಿಕೇರಿ: ಗ್ರಾಮಾಂತರ ಪೊಲೀಸ್ ಠಾಣೆ ಸರಹದ್ದಿನಲ್ಲಿ ಅಕ್ರಮವಾಗಿ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಗಳನ್ನು ಪತ್ತೆ ಹಚ್ಚುವಲ್ಲಿ ಕೊಡಗು ಜಿಲ್ಲಾ ಪೊಲೀಸ್ ಯಶಸ್ವಿಯಾಗಿದೆ.


ಪಂಚಳ್ಳಿ ನಿವಾಸಿಗಳಾದ ಸದ್ದಾಂ ಹುಸ್ಸೇನ್(೩೫), ಜಾಬಿಯ ಉಲ್ಲಾಖಾನ್(೪೦) ಬಂಧಿತ ಆರೋಪಿಗಳು. ಆರೋಪಿಗಳ ಬಳಿಯಿಂದ ೨೪೧.೪ ಗ್ರಾಂ ಗಾಂಜಾವನ್ನು ನಿಷೇದಿತ ಮಾದಕ ವಸ್ತುವಿನೊಂದಿಗೆ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ಮೂರ್ನಾಡುವಿನಿಂದ-ಕೊಂಡಂಗೇರಿ ಹೋಗುವ ರಸ್ತೆಯಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ತನಿಖಾ ತಂಡ ದಾಳಿ ನಡೆಸಿತು. ಮಡಿಕೇರಿ ಉಪ ವಿಭಾಗದ ಡಿವೈಎಸ್‌ಪಿ ಎಂ.ಜಗದೀಶ್, ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆ, ಪಿಐ ಯು.ಉಮೇಶ್ ಹಾಗೂ ಸಿಬ್ಬಂದಿಗಳ ತಂಡವನ್ನು ರಚಿಸಿ ತನಿಖೆ ಕೈಗೊಳ್ಳಲಾಗಿತ್ತು. ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳ ಕಾರ್ಯಕ್ಷಮತೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಶ್ಲಾಘಿಸಿದ್ದಾರೆ.


ಯುವಕ-ಯುವತಿಯರು ಮಾದಕ ವ್ಯಸನಿಗಳಾಗಿ ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳುವುದನ್ನು ತಡೆಗಟ್ಟುವ ಸಲುವಾಗಿ ಮಾದಕ ವಸ್ತುಗಳನ್ನು ಬಳಸುವ ಹಾಗೂ ಮಾರಾಟ ಮಾಡುವ ವ್ಯಕ್ತಿಗಳು ಕಂಡುಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆ ಹಾಗೂ ಕೆ.ಎಸ್.ಪಿ ತಂತ್ರಾಶದ ಮೂಲಕ ಮಾಹಿತಿ ನೀಡುವಂತೆ ಹಾಗೂ ಸಹಕರಿಸಬೇಕು. ಅಕ್ರಮ ಚಟುವಟಿಕೆಗಗಳ ಕುರಿತು ಮಾಹಿತಿ ಒದಗಿಸುವವರ ವಿವರಗಳನ್ನು ಬಹಿರಂಗಪಡಿಸುವುದಿಲ್ಲ ಎಂದು ಎಸ್‌ಪಿ ಕೆ.ರಾಮರಾಜನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net