ಮೈಸೂರಿನಲ್ಲಿ ಮಾದಕ ವಸ್ತು ಮಾರಾಟ : ವ್ಯಕ್ತಿ ಬಂಧನ

Drugs (3)
Published on

ಮೈಸೂರು: ನಗರದಲ್ಲಿ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಆರೋಪಿಯೊಬ್ಬನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತನಿಂದ 1.05 ಲಕ್ಷ ರೂ. ವೌಲ್ಯದ 35 ಗ್ರಾಂ. ತೂಕದ ಎಂಡಿಎಂಎ ಅನ್ನು ವಶಕ್ಕೆ ಪಡೆಯಲಾಗಿದೆ. ಅ.17ರಂದು ಮಹದೇಶ್ವರ ಬಡಾವಣೆಯ ಗೋಮಾಳದಲ್ಲಿ ನಿಷೇಧಿತ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಯಿತು. ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜೂಜಾಟ 12 ಜನರ ಬಂಧನ: ಆಲನಹಳ್ಳಿಯಲ್ಲಿ ಜೂಜಾಟವಾಡುತ್ತಿದ್ದ 12 ಆರೋಪಿಗಳನ್ನು ಬಂಧಿಸಿದ ಸಿಸಿಬಿ ಪೊಲೀಸರು ಆರೋಪಿಗಳಿಂದ 70,390 ರೂ.ಗಳನ್ನು ವಶಪಡಿಸಿಕೊಂಡಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಅ.17 ರಂದು ಸಿಸಿಬಿ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದರು. ದಾಳಿಯ ಸಂದರ್ಭ ಆರೋಪಿಗಳು ಅಂದರ್ ಬಾಹರ್ ಜೂಜಾಟದಲ್ಲಿ ತೊಡಗಿದ್ದರು. ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net