

ಮೈಸೂರು: ಉದಯಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮವಾಗಿ ನಿಷೇಧಿತ ಎಂಡಿಎಂ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಇತ್ತೀಚೆಗೆ ಬಂಧಿಸಿದ್ದಾರೆ.
ಕಲ್ಯಾಣಗಿರಿ ಹಳೇ ಆರ್‌ಟಿಒ ಕಚೇರಿ ಬಳಿಯ ತ್ರಿವೇಣಿ ಉದ್ಯಾನ ಬಳಿ ನಿಷೇಧಿತ ಎಂಡಿಎಂ ಮಾದಕ ವಸ್ತು ಮಾರಾಟ ಮಾಡುತ್ತಿರುವ ವಿಚಾರ ತಿಳಿದು ಪೊಲೀಸರು ದಾಳಿ ನಡೆಸಿದರು. ಆರೋಪಿಯಿಂದ 20 ಸಾವಿರ ರೂ. ಮೌಲ್ಯದ 6 ಗ್ರಾಂ ಎಂಡಿಎಂ ವಶಕ್ಕೆ ಪಡೆಯಲಾಗಿದೆ.ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.