ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ

drugs
Published on

ಮಡಿಕೇರಿ:

ಮಡಿಕೇರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮಹದೇವಪೇಟೆಯಲ್ಲಿರುವ ಎ.ವಿ. ಶಾಲೆ ಕಡೆಯಿಂದ ಅಬ್ಬಿಫಾಲ್ಸ್ ಕಡೆಗೆ ಹೋಗುವ ಜಂಕ್ಷನ್‌ನಲ್ಲಿ ಬುಧವಾರ ಅಕ್ರಮವಾಗಿ ನಿಷೇಧಿತ ಮಾದಕ ವಸ್ತು ಎಂಡಿಎAಎ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪತ್ತೆ ಹಚ್ಚುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ.

ನಗರದ ಅಬ್ದುಲ್ ಕಲಾಂ ಬಡಾವಣೆ ನಿವಾಸಿ ಮೊಹಮ್ಮದ್ ಶರ್ಜಿಲ್ (41) ಬಂಧಿತ ಆರೋಪಿ. ಈತನಿಂದ 3.66 ಗ್ರಾಂ ಎಂಡಿಎAಎ ನಿಷೇಧಿತ ಮಾದಕ ವಸ್ತು, ಕೃತ್ಯಕ್ಕೆ ಬಳಸಿದ ಒಂದು ದ್ವಿಚಕ್ರ ವಾಹನ ವಶಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಎಸ್.ಪಿ. ಕೆ. ರಾಮರಾಜನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಡಿಕೇರಿ ಡಿವೈಎಸ್‌ಪಿ ಪಿ.ಎ. ಸೂರಜ್, ಸಿಪಿಐ ಪಿ.ಕೆ. ರಾಜು, ಪಿಎಸ್‌ಐ ಅನ್ನಪೂರ್ಣ ಎಸ್. ಶಂಕರಗುಳ್ಳಿ, ಮಡಿಕೇರಿ ನಗರ ಪೊಲೀಸ್ ಠಾಣೆ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಯುವಕ-ಯುವತಿಯರು ಮಾದಕ ವ್ಯಸನಿಗಳಾಗಿ ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳುವುದನ್ನು ತಡೆಗಟ್ಟುವ ಸಲುವಾಗಿ ಹಾಗೂ ಡ್ರಗ್ಸ್ ಮತ್ತು ಮಾದಕ ದ್ರವ್ಯಗಳ ಮುಕ್ತ ಜಿಲ್ಲೆಯಾನ್ನಾಗಿಸಲು ಸಹಕಸುವ ನಿಟ್ಟಿನಲ್ಲಿ ನಿಷೇಧಿತ ಮಾದಕ ವಸ್ತುಗಳನ್ನು ಬಳಸುವ ಹಾಗೂ ಸರಬರಾಜು ಅಥವಾ ಮಾರಾಟ ಮಾಡುವ ವ್ಯಕ್ತಿಗಳು ಕಂಡುಬAದಲ್ಲಿ ಸ್ಥಳೀಯ ಪೊಲೀಸ್ ಠಾಣೆ ಹಾಗೂ ಕೆ.ಎಸ್.ಪಿ ತಂತ್ರಾಶದ ಮೂಲಕ ಮಾಹಿತಿ ನೀಡಿ ಸಹಕರಿಸುವಂತೆ ಸಾರ್ವಜನಿಕರಲ್ಲಿ ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net