ಮಾದಕವಸ್ತು ಸೇವನೆ ಇಬ್ಬರ ಬಂಧನ

drugs
Published on

ಮಂಗಳೂರು: ನಗರದ ಕೊಡಿಯಾಲಬೈಲ್ ಮತ್ತು ಕಸಬ ಬೆಂಗರೆ ಬಳಿ ಮಾದಕ ವಸ್ತು ಸೇವನೆ ಮಾಡಿದ ಆರೋಪದ ಮೇಲೆ ಇಬ್ಬರನ್ನು ನಗರ ಪೊಲೀಸರು ಬಂಧಿಸಿದ್ದಾರೆ.


ಕಾರ್‌ಸ್ಟ್ರೀಟ್ ಟಿ.ಸಿ. ರೋಡ್ ನಿವಾಸಿ ಪ್ರೀತಮ್ ಶೆಟ್ಟಿ ಮತ್ತು ಕುದ್ರೋಳಿ ಅಳಕೆ ತಹಿಬಾ ಟವರ್ಸ್ ನಿವಾಸಿ ಮೊಹಮ್ಮದ್ ಸಲ್ಮಾನ್ ಬಂಧಿತ ಆರೋಪಿಗಳು.
ಮಂಗಳವಾರ ಮಧ್ಯಾಹ್ನ 1-30ಕ್ಕೆ ನಗರದ ಕೊಡಿಯಾಲಬೈಲ್ ಬಳಿ ಪ್ರೀತಮ್ ಶೆಟ್ಟಿ ಅಮಲಿನಲ್ಲಿದ್ದಂತೆ ಕಂಡು ಬಂದಿದ್ದು, ವಿಚಾರಿಸಿದಾಗ ಮಾದಕ ವಸ್ತು ಗಾಂಜಾ ಸೇವನೆ ಮಾಡಿರುವುದು ತಿಳಿದು ಬಂದಿದೆ. ಆತನನ್ನು ವಶಕ್ಕೆ ಪಡೆದು ವೈದ್ಯಕೀಯ ತಪಾಸಣೆ ನಡೆಸಿದಾಗ ಮಾದಕ ಸೇವನೆ ಮಾಡಿರುವುದು ದೃಢಪಟ್ಟಿದೆ.


ಆರೋಪಿ ವಿರುದ್ಧ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೋಮವಾರ 11.30ಕ್ಕೆ ಕಸಬಾ ಬೆಂಗರೆಯ ಸೂಪರ್ ಸ್ಟಾರ್ ಮೈದಾನದ ಸಮೀಪ ಯಾವುದೋ ಮಾದಕ ವಸ್ತು ಸೇವನೆ ಮಾಡಿದ ಆರೋಪದಲ್ಲಿ ಸಲ್ಮಾನ್ ನನ್ನು ವಶಕ್ಕೆ ಪಡೆಯಲಾಗಿದೆ. ಆತನನ್ನು ವೈದ್ಯಕೀಯ ತಪಾಸಣೆಗೊಳಪಡಿಸಿದಾಗ ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟಿದೆ.
ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net