ಡ್ರಗ್ಸ್ ದಂಧೆಗೆ ಕಡಿವಾಣ ಹಾಕಲು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಆಗ್ರಹ

030920 Sindhanuru All India Students Fedration Appeal
ಡ್ರಗ್ಸ್ ದಂಧೆಯಲ್ಲಿ ತೊಡಗಿಕೊಂಡವರ ವಿರುದ್ಧ ದೇಶದ್ರೋಹಿ ಪ್ರಕರಣ ದಾಖಲಿಸಬೇಕೆಂದು ಒತ್ತಾಯಿಸಿ ಸಿಂಧನೂರಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ತಹಸೀಲ್ದಾರ್‌ಗೆ ಮನವಿ ಸಲ್ಲಿಸಿತು.
Published on

ಸಿಂಧನೂರು: ಡ್ರಗ್ಸ್ ದಂಧೆಯಲ್ಲಿ ತೊಡಗಿಕೊಂಡಿವರನ್ನು ದೇಶದ್ರೋಹಿ ಪ್ರಕರಣ ದಾಖಲಿಸಬೇಕೆಂದು ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ತಹಸೀಲ್ದಾರ್ ಮಂಜುನಾಥ ಭೋಗಾವತಿಗೆ ಮನವಿ ಸಲ್ಲಿಸಿತು.

ಮಾದಕ ವಸ್ತುಗಳು ಸಮಾಜಕ್ಕೆ ಅತ್ಯಂತ ಹಾನಿಕಾರಕವಾಗಿವೆ. ಈ ಮಾದಕ ವಸ್ತುಗಳ ವ್ಯಸನಕ್ಕೆ ತುತ್ತಾದವರು ಸ್ವತಃ ತಮ್ಮ ಆರೋಗ್ಯ ಹಾಳು ಮಾಡಿಕೊಳ್ಳುವುದಲ್ಲದೆ, ಸಮಾಜದ ಸ್ವಾಸ್ಥ್ಯ ಹಾಳು ಮಾಡುತ್ತಾರೆ ಎಂಬ ಅಂಶ ಗಮನದಲ್ಲಿಟ್ಟುಕೊಂಡು ಎಬಿವಿಪಿ 2014ರಲ್ಲಿ ಶಾಲಾ-ಕಾಲೇಜ್ ಕ್ಯಾಂಪಸ್‌ಗಳಲ್ಲಿನ ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಇಡೀ ದೇಶದ್ಯಾಂತ ನಶಾಮುಕ್ತ ಭಾರತ ಎಂಬ ಅಭಿಯಾನ ನಡೆಸಿತ್ತು. ಸಾರ್ವಜನಿಕ ಸ್ಥಳ ಮತ್ತು ಶಾಲಾ ಕ್ಯಾಂಪಸ್‌ಗಳಲ್ಲಿ ಅನೇಕ ಕಾರ್ಯಕ್ರಮ ಹಮ್ಮಿಕೊಂಡು ಜಾಗೃತಿಯೂ ಮೂಡಿಸಿತ್ತು.

ರಾಜ್ಯದ ಹಲವು ಶಾಲಾ-ಕಾಲೇಜ್‌ಗಳಲ್ಲಿ ಡ್ರಗ್ಸ್ ಜಾಲ ವ್ಯವಸ್ಥಿತವಾಗಿ ಕೋಡ್ ಮೂಲಕ ಈ ದಂಧೆ ನಡೆಸುತ್ತಿದೆ. ಇದರಿಂದ ಕಾಲೇಜ್‌ಗಳಲ್ಲಿ ಡ್ರಗ್ಸ್ ಅಡಪ್ಟ್ ಆಗುವುದು ಒಂದು ರೀತಿಯಲ್ಲಿ ಪ್ಯಾಶನ್ ಆಗಿದೆ. ಈ ನಿಟ್ಟಿನಲ್ಲಿ ಪೋಷಕರು ಎಚ್ಚರಿಕೆ ವಹಿಸಿಕೊಳ್ಳಬೇಕಾಗಿದೆ. ಬೆಂಗಳೂರಿನ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸ್ ಇಲಾಖೆ ತನಿಖೆ ಮತ್ತಷ್ಟು ಚುರುಕುಗೊಳಿಸಬೇಕಾಗಿದೆ. ಈ ಜಾಲದಲ್ಲಿ ಪ್ರಭಾವಿಗಳ ಹಸ್ತಕ್ಷೇಪ ಇರುವುದರಿಂದ ಯಾವುದೇ ಒತ್ತಡಕ್ಕೆ ಮಣಿಯದೆ ಗೃಹ ಇಲಾಖೆಗೆ ಸಂಪೂರ್ಣ ಸ್ವಾತಂತ್ರ್ಯ ನೀಡಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಯಿತು.

ಎಬಿವಿಪಿಯ ಸಂಚಾಲಕ ಚನ್ನಾರೆಡ್ಡಿ ನಂದಿಹಾಳ ಅಕ್ಷಯ ಹಿರೇಮಠ, ಬಸವಗೌಡ, ಅಭಿಷೇಕ ಖಂಡಿಮಠ, ವಿಶ್ವ, ರೊಹಿತ್, ಶಿವಕುಮಾರ, ರಾಘವೇಂದ್ರ, ರುದ್ರಾ ಹಿರೇಮಠ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net