ಡ್ರಗ್ಸ ದಂಧೆಕೋರರ ವಿರುದ್ಧ ಕ್ರಮ ಕೈಗೊಳ್ಳಿ

3
Published on

ಬೆಳಗಾವಿ: ಡ್ರಗ್ಸ ದಂಧೆಯಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

ಬಳಿಕ ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ರಾಜ್ಯದಲ್ಲಿ ಡ್ರಗ್ಸ್ ಜಾಲ ದೊಡ್ಡಮಟ್ಟದಲ್ಲಿ ವ್ಯಾಪಿಸಿದೆ. ಕನ್ನಡ ಚಲನಚಿತ್ರ ರಂಗದ ನಟ-ನಟಿಯರು, ಪ್ರಭಾವಿಗಳು, ರಾಜಕಾರಣಿಗಳ ಮಕ್ಕಳು ಈ ದಂಧೆಯಲ್ಲಿ ಭಾಗಿಯಾಗಿರುವ ಶಂಕೆಯಿದೆ. ಶಾಲಾ-ಕಾಲೇಜುಗಳಲ್ಲೂ ಡ್ರಗ್ಸ್ ದಂಧೆ ನಡೆಯುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಸರ್ಕಾರ ನಿರ್ದಾಕ್ಷಿಣ್ಯವಾಗಿ ತನಿಖೆ ನಡೆಸಬೇಕು.

ತಪ್ಪಿತಸ್ಥರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಿ ಕ್ರಮ ಜರುಗಿಸಬೇಕು. ಡ್ರಗ್ಸ್ ಜಾಲ ನಿಯಂತ್ರಣಕ್ಕಾಗಿ ಕಠಿಣ ಕಾನೂನು ರೂಪಿಸಬೇಕು ಎಂದು ಒತ್ತಾಯಿಸಿದರು. ಎಬಿವಿಪಿ ಮಹಾನಗರ ಘಟಕದ ಕಾರ್ಯದರ್ಶಿ ಕಿರಣ ದುಕಾನದಾರ್, ರೋಹಿತ್ ಉಮನಾಬಾದಿಮಠ, ಅಶ್ವಿನಿ ಕಂಚಿ, ಎಸ್.ಕಾರ್ತಿಕ ಮತ್ತಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net