ಡ್ರಗ್ಸ್ ಮಾಫಿಯಾದಲ್ಲಿ ತೊಡಗಿದವರ ಬಂಧಿಸಿ

21Khanapur1-Web
ಖಾನಾಪುರ ತಾಲೂಕಿನ ಗಂದಿಗವಾಡ ಗ್ರಾಮದಲ್ಲಿ ಬಿಜೆಪಿ ಯುವಮೋರ್ಚಾ ವತಿಯಿಂದ ಆಯೋಜಿಸಿದ್ದ ಡ್ರಗ್ಸ್ ಮುಕ್ತ ಕರ್ನಾಟಕಕ್ಕಾಗಿ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಚನ್ನಬಸವದೇವರು, ಸುನೀಲ ಮಡ್ಡಿಮನಿ, ಸಂಜಯ ಕುಬಲ, ಪ್ರಮೋದ ಕೊಚೇರಿ, ಬಾಬಣ್ಣ ಪಾಟೀಲ ಇದ್ದರು.
Published on

ಖಾನಾಪುರ: ಭಾರತೀಯ ಜನತಾ ಪಕ್ಷದ ಯುವ ಮೋರ್ಚಾ ವತಿಯಿಂದ ಡ್ರಗ್ಸ್ ಮುಕ್ತ ಕರ್ನಾಟಕಕ್ಕಾಗಿ ಸಹಿ ಸಂಗ್ರಹ ಅಭಿಯಾನ ಆರಂಭಿಸಲಾಗಿದೆ ಎಂದು ಮಂಗೆನಕೊಪ್ಪ ತಾಪಂ ಸದಸ್ಯ, ಬಿಜೆಪಿ ಮುಖಂಡ ಶಿವಾನಂದ ಚಲವಾದಿ ತಿಳಿಸಿದ್ದಾರೆ.

ತಾಲೂಕಿನ ಗಂದಿಗವಾಡ ಗ್ರಾಮದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸಹಿ ಸಂಗ್ರಹ ಅಭಿಯಾನವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಸಮಾಜಕ್ಕೆ ಕಂಟಕವಾಗಿ ಕಾಡುತ್ತಿರುವ ಡ್ರಗ್ಸ್ ಮಾಫಿಯಾವನ್ನು ಬುಡಸಮೇತ ಕಿತ್ತುಹಾಕಬೇಕು. ಇದರಲ್ಲಿ ಭಾಗಿಯಾದವರನ್ನು ಬಂಧಿಸಿ, ಅವರಿಗೆ ಕಠಿಣ ಕಾನೂನು ಶಿಕ್ಷೆ ವಿಧಿಸಬೇಕು. ಡ್ರಗ್ಸ್ ವಿರುದ್ಧದ ತನಿಖೆ ರಾಜಕೀಯ ರಹಿತವಾಗಿರಬೇಕು ಎಂದು ಆಗ್ರಹಿಸಿದರು.

ಮಾರಕ ಡ್ರಗ್ಸ್ ಚಟಕ್ಕೆ ಬಲಿಯಾಗಿ ಭವಿಷ್ಯ ಹಾಳುಮಾಡಿಕೊಳ್ಳುತ್ತಿರುವ ಯುವಜನರನ್ನು ರಕ್ಷಿಸಬೇಕು ಎಂಬ ಉದ್ದೇಶ ಮುಂದಿಟ್ಟುಕೊಂಡು ಬಿಜೆಪಿ ಯುವ ಮೋರ್ಚಾದಿಂದ ಡ್ರಗ್ಸ್ ಮುಕ್ತ ಕರ್ನಾಟಕಕ್ಕಾಗಿ ಸಹಿ ಸಂಗ್ರಹ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಇದರಲ್ಲಿ ಪ್ರತಿಯೊಬ್ಬರೂ ಭಾಗವಹಿಸಿ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದು ಶಿವಾನಂದ ಚಲವಾದಿ ಕರೆ ನೀಡಿದರು ಅವರೊಳ್ಳಿ-ಬಿಳಕಿ ರುದ್ರಸ್ವಾಮಿ ಮಠದ ಚನ್ನಬಸವದೇವರು ಸಾನ್ನಿಧ್ಯ ವಹಿಸಿದ್ದರು. ಅಭಿಯಾನದ ಉದ್ದೇಶದ ಬಗ್ಗೆ ಪಕ್ಷದ ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನೀಲ ಮಡ್ಡಿಮನಿ ವಿವರಿಸಿದರು. ಪಕ್ಷದ ಬ್ಲಾಕ್ ಅಧ್ಯಕ್ಷ ಸಂಜಯ ಕುಬಲ, ಪ್ರಮೋದ ಕೊಚೇರಿ, ಬಾಬಣ್ಣ ಪಾಟೀಲ, ತಾಪಂ ಸದಸ್ಯರಾದ ಶಿವಾನಂದ ಚಲವಾದಿ, ಮಾರುತಿ ಕಮತಗಿ, ತಾಪಂ ಮಾಜಿ ಸದಸ್ಯ ಬಸವರಾಜ ಸಾಣಿಕೊಪ್ಪ, ಕಕ್ಕೇರಿ ಜಿಪಂ ವಿಭಾಗದ ಉಪಾಧ್ಯಕ್ಷ ಸಂತೋಷ ಬಡಿಗೇರ, ಯುವ ಮೋರ್ಚಾ ತಾಲೂಕು ಕಾರ್ಯದರ್ಶಿ ಮಾರುತಿ ಟಕ್ಕೇಕರ, ಮಹಾಬಲೇಶ್ವರ ಚವಲಗಿ, ರವಿ ಬನೋಶಿ, ಗುಂಡು ತೋಪಿನಕಟ್ಟಿ ಹಾಗೂ ಇತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net