ಎಂಡಿಎಂಎ ಮಾರಾಟ ಆರೋಪಿ ಬಂಧನ

mng--26 sep Lukumanul Hakeem
Published on

ಮಂಗಳೂರು: ಡ್ರಗ್ಸ್ ಫ್ರಿ ಮಂಗಳೂರು ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಮಂಗಳೂರು ನಗರದಾದ್ಯಂತ ಸಾರ್ವಜನಿಕರಿಗೆ ಹಾಗೂ ವಿದಾರ್ಥಿಗಳಿಗೆ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಯುವಕನನ್ನು ಬಂಧಿಸಿದ್ದಾರೆ.


ಸುಳ್ಯ ತಾಲೂಕಿನ ಅಜ್ಜಾವರದ ಇರಂತಮಜಲು ನಿವಾಸಿ, ಪ್ರಸ್ತುತ ಬಿಜೈ ಅಪಾರ್ಟ್‌ಮೆಂಟ್‌ನಲ್ಲಿ ವಾಸವಿದ್ದ ಲುಕುಮಾನುಲ್ ಹಕೀಂ ಯಾನೆ ಹಕೀಂ(22) ಬಂಧಿತ ಆರೋಪಿ. ಈತ ನಗರದ ಪದವಿ ಕಾಲೇಜೊಂದರ ವಿದ್ಯಾರ್ಥಿ.


ಮಂಗಳೂರು ನಗರದ ಬೆಂದೂರ್‌ವೆಲ್ ಪರಿಸರದಲ್ಲಿ ಯುವಕ ಅಕ್ರಮವಾಗಿ ಎಂಡಿಎಂಎ ಮಾದಕ ವಸ್ತುವನ್ನು ವಶದಲ್ಲಿರಿಸಿಕೊಂಡು ಸಾರ್ವಜನಿಕರಿಗೆ ಹಾಗೂ ವಿದಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ಎಂಡಿಎಂಎ ನಿಷೇದಿತ ಮಾದಕ ವಸ್ತುವನ್ನು ಆತನಿಂದ ವಶಪಡಿಸಿಕೊಂಡಿದ್ದಾರೆ.


ಬಂಧಿತನಿಂದ ಒಟ್ಟು 25 ಗ್ರಾಂ ತೂಕದ 1,25,000 ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು, ಒಂದು ಮೊಬೈಲ್ ಫೋನ್, ಡಿಜಿಟಲ್ ತೂಕ ಮಾಪನ ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 1,60,000 ರೂ. ಎಂದು ಅಂದಾಜಿಸಲಾಗಿದೆ.


ಕಾರ್ಯಚರಣೆಯಲ್ಲಿ ಮಂಗಳೂರು ನಗರದ ಪೊಲೀಸ್ ಆಯುಕ್ತ ಅನುಪಮ್ ಅಗರ್‌ವಾಲ್ ಅವರ ಮಾರ್ಗದರ್ಶನದ್ಲಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net