ಹಾನಗಲ್ಲ: ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಮೃತಪಟ್ಟ ಘಟನೆ ಪಟ್ಟಣದ ಕಂಚಗಾರ ಗಲ್ಲಿಯಲ್ಲಿ ಮಂಗಳವಾರ ನಡೆದಿದೆ..ರಾಮಸ್ವರೂಪ ಚಿದಿಯಾ (50) ಮೃತ ವ್ಯಕ್ತಿ.ಈತ ಮದ್ಯ ಸೇವಿಸಿದ ಮತ್ತಿನಲ್ಲಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಕುರಿತು ಹಾನಗಲ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.