ರಸ್ತೆಗೆ ಉರುಳಿ ಬಿದ್ದ ಒಣ ಬಿದಿರು

IMG-20240804-WA0325
Published on

ಹನೂರು: ತಾಲೂಕಿನ ಮಲೆಮಹದೇಶ್ವರಬೆಟ್ಟ-ತಾಳುಬೆಟ್ಟ ಮಾರ್ಗದಲ್ಲಿ ಭಾನುವಾರ ದೊಡ್ಡ ಒಣ ಬಿದಿರಿನ ಪೊದೆ ರಸ್ತೆಗೆ ಅಡ್ಡಲಾಗಿ ಬಿದ್ದು ವಾಹನ ಸವಾರರು ಕೆಲ ಕಾಲ ಪರದಾಡಿದರು.


ಭೀಮನ ಅಮಾವಾಸ್ಯೆ ಹಿನ್ನೆಲೆಯಲ್ಲಿ ವಾಹನ ದಟ್ಟಣೆ ಹೆಚ್ಚಾಗಿದ್ದರಿಂದ ಈ ಮಾರ್ಗದಲ್ಲಿ ಆಗಾಗ್ಗೆ ಟ್ರಾಫಿಕ್ ಜಾಮ್ ಆಗುತ್ತಿತ್ತು. ಇತ್ತ ಒಂದೆಡೆ ಬಿದಿರಿನ ಬೊಂಬುಗಳು ರಸ್ತೆಗೆ ಉರುಳಿ ಬಿದ್ದಿದ್ದರಿಂದ ಸುಮಾರು 2 ಗಂಟೆಗಳ ಕಾಲ ಸಂಚಾರದಲ್ಲಿ ವ್ಯತಯವಾಗಿತ್ತು. ಆದಾಗ್ಯೂ ಈ ವೇಳೆ ಭಕ್ತರ ಸಹಕಾರದಿಂದ ಕೆಲ ವಾಹನಗಳ ಚಾಲಕರು ಹಾಗೂ ನಿರ್ವಾಹಕರು ಬಿದಿರಿನ ಬೊಂಬುಗಳನ್ನು ಸ್ವಲ್ಪ ಸರಿಸಿ ಸಂಚರಿಸಿದರು.


ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಬಿದಿರನ್ನು ಕೊಂಚ ತೆರೆವುಗೊಳಿಸಿದ್ದರಿಂದ ವಾಹನಗಳು ಸಂಚರಿಸಲು ಸಾಧ್ಯವಾಯಿತು. ಇದರಿಂದ ಭಕ್ತರು ಕಿರಿಕಿರಿ ಅನುಭವಿಸುವಂತಾಯಿತು.


ಅರಣ್ಯ ಇಲಾಖೆಯ ನಿರ್ಲಕ್ಷ್ಯ: ಕಳೆದ ಹಲವು ತಿಂಗಳಿನಿಂದ ಒಣಗಿದ ಬಿದಿರು ಬೊಂಬುಗಳು ರಸ್ತೆಗೆ ಬಾಗಿದ್ದವು. ಈ ಬಗ್ಗೆ ಸ್ಥಳಿಯರಿಂದ ತೆರೆವುಗೊಳಿಸುವಂತೆ ಒತ್ತಾಯ ಕೇಳಿಬಂದಿತ್ತು. ಆದರೆ ಅರಣ್ಯ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದರು. ಇದರಿಂದ ಗಾಳಿಯ ರಭಸಕ್ಕೆ ಬಿದಿರಿನ ಬೊಂಬುಗಳು ರಸ್ತೆಗೆ ಅಡ್ಡಲಾಗಿ ಬಿದ್ದು ಸಂಚಾರಕ್ಕೆ ತೊಡುಕಾಯಿತು. ಇದರಿಂದ ಭಕ್ತರು ತೊಂದರೆ ಅನುಭವಿಸಬೇಕಾಯಿತು. ಆದ್ದರಿಂದ ಸಂಬಂಧಪಟ್ಟ ಅರಣ್ಯ ಇಲಾಖೆಯ ಅಧಿಕಾರಿಗಳು ಇನ್ನಾದರೂ ಇತ್ತ ಗಮನಹರಿಸಿ ರಸ್ತೆ ಬದಿಯಲ್ಲಿ ಒಣಗಿ ನಿಂತಿರುವ ಬಿದಿರನ್ನು ತೆರೆವುಗೊಳಿಸುವುದರ ಮೂಲಕ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net