ರಾಜ್ಯದಲ್ಲಿ ಒಣಹವೆ ಶುರು:19ರಿಂದ ಮತ್ತೆ ಮಳೆ ಮೂನ್ಸೂಚನೆ

bhr rain-1
ಬಾಳೆಹೊನ್ನೂರಿನ ರಂಭಾಪುರಿ ಪೀಠದಲ್ಲಿ ಬುಧವಾರ ಮಳೆ ಆರಂಭಗೊಳ್ಳುವ ಮುನ್ನ ಮೋಡ ಕವಿದ ವಾತಾವರಣ ಕಂಡುಬಂದಿದ್ದು ಹೀಗೆ.
Published on

ಬೆಂಗಳೂರು: ರಾಜ್ಯದ ಹಲವೆಡೆ ಸುರಿಯುತ್ತಿದ್ದ ಮಳೆ ಶನಿವಾರದಿಂದ ಕ್ಷೀಣವಾಗಿದೆ. ಬೆಳಗ್ಗೆಯಿಂದ ಹಲವು ಜಿಲ್ಲೆಗಳಲ್ಲಿ ಬಿಸಿಲು ವಾತಾವರಣ ಕಾಣಿಸಿಕೊಂಡಿದೆ. ಗರಿಷ್ಠ,ಕನಿಷ್ಠ ತಾಪಮಾನದಲ್ಲಿ ಉಷ್ಣಾಂಶ ತುಸು ಏರಿಕೆಯಾಗಿದೆ. ಡಿ.18ರವರೆಗೆ ರಾಜ್ಯಾದ್ಯಂತ ಒಣಹವೆ ಮುಂದುವರಿದಿದರೆ, ಡಿ.19ರಿಂದ ಮತ್ತೆ ಮಳೆ ಶುರುವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ಕೊಟ್ಟಿದೆ.

ಬೆಂಗಳೂರು ನಗರ, ಬೆಂ.ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಹಾಸನ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ತುಮಕೂರು, ಕೋಲಾರ, ವಿಜಯನಗರ, ಬಳ್ಳಾರಿಯಲ್ಲಿ ಡಿ.19ರಿಂದ ಡಿ.21 ರವರೆಗೆ ವರ್ಷಧಾರೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್​, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿಯಲ್ಲಿ ಡಿ. 19ರಿಂದ ಮುಂದಿನ 2 ದಿನ ಸಾಧಾರಣ ಪ್ರಮಾಣದಲ್ಲಿ ಮಳೆಯಾಗಲಿದೆ.

ಬೆಂಗಳೂರು ಸುತ್ತಮುತ್ತ ಪ್ರದೇಶಗಳಲ್ಲಿ ಪ್ರದೇಶಗಳಲ್ಲಿ ಮುಂದಿನ 2 ದಿನ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಬೆಳಗ್ಗಿನ ಜಾವ ಮಂಜು/ಇಬ್ಬನಿ ಬೀಳಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನದಲ್ಲಿ ಕ್ರಮವಾಗಿ 27 ಮತ್ತು 18 ಡಿ.ಸೆ.ದಾಖಲಾಗಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net