ಕರಾವಳಿಯಾಧ್ಯಂತ ಮುಂದುವರಿದ ಬಿಸಿಲು

bisilu
Published on

ಮಂಗಳೂರು: ಕರಾವಳಿಯಾಧ್ಯಂತ ಸೋಮವಾರ ಪ್ರಖರ ಬಿಸಿಲು ಸಹಿತ ಒಣಹವೆ ಮುಂದುವರಿದಿದೆ. ಬೆಳಗ್ಗೆ ಕೆಲವು ಹೊತ್ತು ಮೋದ ಕವಿದಿದ್ದರೂ ನಂತರ ಪ್ರಖರ ಬಿಸಿಲಿನೊಂದಿಗೆ ಒಣಹವೆ ಇತ್ತು.

ದ.ಕ ಜಿಲ್ಲೆಯಲ್ಲಿ ಸೋಮವಾರ ಸರಾಸರಿ 35.9 ಡಿಗ್ರಿ ಗರಿಷ್ಟ, 24.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದ್ದು, ರಾತ್ರಿ 25 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಠಾಂಶ ದಾಖಲಾಗಿರುವುದರಿಂದ ರಾತ್ರಿ ಪೂರಾ ಒಣ ಚಳಿ ಮುಂದುವರಿದಿತ್ತು. ದ.ಕ, ಉಡುಪಿ ಹಾಗೂ ಉತ್ತರ ಕನ್ನಡ ಭಾಗದಲ್ಲಿ ಸರಾಸರಿ 36.7 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ರಾತ್ರಿ ಮಳೆ ಕಾಡು ಹಾಗು ಪಶ್ಚಿಮಘಟ್ಟದ ಹಲವಡೆ ಹೆಚ್ಚಿನ ಪ್ರಮಾಣದ ಮೋಡಕವಿದ ವಾತಾವರಣ ಕಂಡುಬಂದಿದೆ.

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಕಂಡುಬಂದಿದೆ. ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆಯಿದ್ದು, ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. ಮುಂದಿನ 2-3 ದಿನ ರಾತ್ರಿ ವೇಳೆ ಚಳಿಯ ತೀವ್ರತೆ ಸಾಧಾರಣಕ್ಕಿಂತ ತುಸು ಹೆಚ್ಚಾಗಲಿದೆ. ಹಗಲು ಮೋಡ ಕವಿದ ವಾತಾವರಣ ಸಹಿತ ಒಣ ಹವೆ ಮುಂದುವರಿಯಲಿದೆ ಎಂದು ರಾಷ್ಟ್ರೀಯ ಹವಾಮಾನ ಮನ್ಸೂಚನಾ ಕೇಂದ್ರ ಮಾಹಿತಿ ನೀಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net