

ಮಡಿಕೇರಿ:
ಮಡಿಕೇರಿಯಲ್ಲಿ ನಡೆದ ೮೦ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದ ನಾ. ಡಿಸೋಜಾ ಹೆಸರಿನಲ್ಲಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಜಿಲ್ಲೆಯ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಸಣ್ಣ ಕಥೆ ಬರೆಯುವ ಸ್ಪರ್ಧೆ ಏರ್ಪಡಿಸಲಾಗಿದೆ. ನಾ ಡಿಸೋಜಾ ದತ್ತಿ ಕಾರ್ಯಕ್ರಮವಾಗಿ ಈ ಸ್ಪರ್ಧೆ ನಡೆಯಲಿದೆ. ವಿದ್ಯಾರ್ಥಿಗಳಲ್ಲಿ ಸಾಹಿತ್ಯಿಕ ಬೆಳವಣಿಗೆ ಉಂಟಾಗಲು ಮತ್ತು ಆಸಕ್ತಿ ಮೂಡಲು ಇದು ಉತ್ತಮ ಕಾರ್ಯಕ್ರಮವಾಗಿದ್ದು ಮಡಿಕೇರಿಯಲ್ಲಿ ಈ ಸ್ಪರ್ಧೆ ಆಯೋಜಿಸಲಾಗಿದೆ.
ಈ ಕುರಿತು ಅರ್ಜಿ ಸಲ್ಲಿಸಲು ಆ.೧೫ ಕೊನೆಯ ದಿನವಾಗಿದೆ. ಅರ್ಜಿಯನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಕಚೇರಿಗೆ ತಲುಪಿಸಬೇಕು. ವಿವರಗಳಿಗಾಗಿ ಕಸಾಪ ಜಿಲ್ಲಾಧ್ಯಕ್ಷ ಎಂ.ಪಿ.ಕೇಶವ ಕಾಮತ್ ಅವರನ್ನು ಮೊ. ಸಂಖ್ಯೆ ೯೪೪೮೩ ೪೬೨೭೬ ಸಂಪರ್ಕಿಸಬಹುದು ಎಂದು ಕಸಾಪ ಪ್ರಕಟಣೆಯಲ್ಲಿ ತಿಳಿಸಲಾಗಿದೆ.