ರಾಜ್ಯ ಬಜೆಟ್ ತಳ ಸಮುದಾಯದ ವಿರೋಧಿ: ದಸಂಸ ರಾಜ್ಯಾಧ್ಯಕ್ಷ ವೆಂಕಟಗಿರಿಯಯ್ಯ ಟೀಕೆ

DSS Criticism on State Budget mandya
Published on

ಮಂಡ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಇತ್ತೀಚೆಗೆ ಮಂಡಿಸಿದ ಬಜೆಟ್ ಐಷಾರಾಮಿ ಜೀವನ ಶೈಲಿಯ ಅಥವಾ ಜೂಜುಕೋರ ಯಜಮಾನನೊಬ್ಬನ ಕುಟುಂಬದ ನಿರ್ವಹಣೆಯಂತೆ ಕಾಣುತ್ತಿದೆ. ಅಭಿವೃದ್ಧಿಗೆ ಪೂರಕವಲ್ಲದ ಹಾಗೂ ತಳ ಸಮುದಾಯದ ವಿರೋಧಿಯಾಗಿದೆ ಎಂದು ದಲಿತ ಸಂಘರ್ಷ ಸಮಿತಿ ರಾಜ್ಯಾಧ್ಯಕ್ಷ ವೆಂಕಟಗಿರಿಯಯ್ಯ ಟೀಕಿಸಿದರು.

ಕಳೆದ ವರ್ಷ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉಪಯೋಜನೆ ಕಾಯ್ದೆಯಂತೆ ಎಸ್ಸಿ, ಎಸ್ಟಿ ಮತ್ತು ಟಿಎಸ್ಪಿ ಅನುದಾನದ 34 ಸಾವಿರ ಕೋಟಿ ರೂ ಖರ್ಚಾಗಿಲ್ಲ. ಕೃಷಿ, ರೇಷ್ಮೆ, ತೋಟಗಾರಿಕೆ, ಎಸ್ಸಿ ಮತ್ತು ಎಸ್ಟಿ ಅಭಿವೃದ್ಧಿ ನಿಗಮ ಸೇರಿದಂತೆ ಬಹುತೇಕ ಇಲಾಖೆಗೆ ಅನುದಾನವೇ ಬಿಡುಗಡೆಯಾಗಿಲ್ಲ. ನಿಗದಿತ ರಾಜಸ್ವ ವಸೂಲಾತಿ ಸಾಧಿಸಿದ ಬಗ್ಗೆ ಸರ್ಕಾರ ಉತ್ತರದಾಯಿತ್ವವಾಗಬೇಕು. ಆದರೆ ಇದ್ಯಾವುದೂ ಇಲ್ಲದೆ ಆಕಾಶ ತೋರಿಸುವ ಬಜೆಟ್ ಮಂಡಿಸಲಾಗಿದೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಆಕ್ರೋಶ ಹೊರಹಾಕಿದರು.

ಮೈಸೂರು ವಿಭಾಗೀಯ ಸಂಚಾಲಕ ಅನಿಲ್‌ಕುಮಾರ್, ಜಿಲ್ಲಾಧ್ಯಕ್ಷ ಕೆ.ಎಂ.ಶ್ರೀನಿವಾಸ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸೋಮಶೇಖರ್, ಮಳವಳ್ಳಿ ತಾಲೂಕು ಅಧ್ಯಕ್ಷ ಸೋಮಶೇಖರ್, ಆನಂದ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net