ಬಲಾಢ್ಯರಿಂದ ಪ್ರಮಾಣ ಪತ್ರ ದುರುಪಯೋಗ: ಆ.30ರಂದು ರಾಜ್ಯಾದ್ಯಂತ ಪ್ರತಿಭಟನೆ

Press Meet
Published on

ಮಂಡ್ಯ: ವೀರಶೈವ ಲಿಂಗಾಯತ ಜಂಗಮ ಸಮುದಾಯದವರು ಪರಿಶಿಷ್ಟ ಜಾತಿ ಪ್ರಮಾಣ ಪತ್ರ ದುರುಪಯೋಗ ಮಾಡಿಕೊಳ್ಳುತ್ತಿರುವುದನ್ನು ಖಂಡಿಸಿ ಆ.30ರಂದು ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಶಿವರಾಜ್ ಮರಳಿಗ ಹೇಳಿದರು.
ದೇಶಕ್ಕೆ ಸ್ವಾತಂತ್ರೃ ಬಂದು ಅಮೃತ ಮಹೋತ್ಸವ ಆಚರಿಸಿಕೊಳ್ಳುತ್ತಿದ್ದರೂ, ಪರಿಶಿಷ್ಟ ಸಮುದಾಯದವರಿಗಂತೂ ಸ್ವಾತಂತ್ರೃ ಸಿಕ್ಕಿಲ್ಲ. ಸಂವಿಧಾನದತ್ತವಾಗಿ ನೀಡಿರುವ ಹಕ್ಕುಗಳನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಮೇಲ್ವರ್ಗದವರಿಂದ ಹಿಡಿದು ಅಧಿಕಾರಿ ವರ್ಗ, ರಾಜಕಾರಣಿಗಳನ್ನು ನಮ್ಮ ಹಕ್ಕನ್ನು ಕಸಿದುಕೊಳ್ಳುತ್ತಿದ್ದಾರೆ. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಸೇರಿದಂತೆ ಅವರ ಪೂರ್ಣ ವಂಶದವರೇ ಪರಿಶಿಷ್ಟ ಜಾತಿ ಸುಳ್ಳು ಪ್ರಮಾಣ ಪತ್ರ ಪಡೆದಿದ್ದಾರೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.
ಸಮುದಾಯಕ್ಕೆ ವಂಚಿಸಿ ಅವರ ತಟ್ಟೆಗೆ ಕೈ ಹಾಕಿ ಮೀಸಲಾತಿ ಎಂಬ ಊಟವನ್ನು ದೌರ್ಜನ್ಯದಿಂದ ಈಗಾಗಲೇ ಕಿತ್ತುಕೊಂಡಿದ್ದಾರೆ. ಎಂ.ಪಿ.ರೇಣುಕಾಚಾರ್ಯ ಅವರ ಹಿಂಬಾಲಕರು ಮತ್ತು ಸಂಬಂಧಿಕರು ಸೇರಿ ಅಖಿಲ ಕರ್ನಾಟಕ ಬೇಡ ಜಂಗಮ್ಮ ಸಂಘಟನೆ ರಚಿಸಿ ಸುಳ್ಳು ಪ್ರಮಾಣ ಪತ್ರವನ್ನು ಪಡೆದುಕೊಂಡಿದ್ದಾರೆ. ಈ ಹಿನ್ನಲೆಯಲ್ಲಿ ಪ್ರಮಾಣ ಪತ್ರ ಪಡೆದುಕೊಂಡಿರುವುದನ್ನು ವಿರೋಧಿಸಿ ರಾಜ್ಯಾದ್ಯಂತ ಡಿಸಿ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದರು.
ಶ್ರೀನಿವಾಸ್, ಸುನೀಲ್‌ಕುಮಾರ್, ಅಪ್ಪಾಜಿ, ಗುರುಲಿಂಗಯ್ಯ, ಶಿವಕುಮಾರ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net