ಒಳ ಮೀಸಲಾತಿಗೆ ಒತ್ತಾಯಿಸಿ ಧರಣಿ ನಾಳೆ

protest-fist-sketch-22337688
Published on

ಹಾಸನ:  ಸುಪ್ರೀಂಕೋರ್ಟ್ ತೀರ್ಪಿನ ಆಧಾರದ ಮೇಲೆ ತಕ್ಷಣವೇ ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿ ಮಾಡುವಂತೆ ಆಗ್ರಹಿಸಿ ಆ.1 ರಂದು ಜಿಲ್ಲಾಧಿಕಾರಿ ಕಚೇರಿಯ ಮುಂದೆ ಶಾಂತಿಯುತ ಪ್ರತಿಭಟನೆ ನಡೆಸುವುದಾಗಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ವಿ.ಆರ್.ಪ್ರಕಾಶ್ ತಿಳಿಸಿದರು. ಅಂದು ಬೆಳಗ್ಗೆ 11ಗಂಟೆಗೆ ನಗರದ ಹೇಮಾವತಿ ಪ್ರತಿಮೆಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸುವುದಾಗಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಸಂಘಟನೆಯ ಲೋಕೇಶ್, ಲಿಂಗರಾಜು, ಮೂಡಲಯ್ಯ, ಶೇಖರಪ್ಪ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net