

ಮಂಡ್ಯ: ರಾಜ್ಯಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನಕ್ಕೆ ಬೆಂಬಲ ನೀಡುತ್ತಿರುವ ರಾಜ್ಯಪಾಲರನ್ನು ಕರ್ನಾಟಕದಿಂದ ವಾಪಸ್ ಕರೆಸಿಕೊಳ್ಳಬೇಕೆಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಜಿಲ್ಲಾ ಶಾಖೆಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದ ಕಾರ್ಯಕರ್ತರು ಡಿಸಿ ಮೂಲಕ ರಾಷ್ಟ್ರಪತಿ ಅವರಿಗೆ ಮನವಿ ರವಾನಿಸಿದರು. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಪಕ್ಷ ಸೇರಿಕೊಂಡು ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿವೆ. ಇದಕ್ಕೆ ರಾಜ್ಯಪಾಲರು ಬೆಂಬಲ ನೀಡುತ್ತಿದ್ದಾರೆ. ಆದ್ದರಿಂದ ಅವರನ್ನು ವಾಪಸ್ ಕರೆಸಿಕೊಳ್ಳಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಸಂಚಾಲಕ ಎಂ.ವಿ.ಕೃಷ್ಣ, ಸಹ ಸಂಚಾಲಕ ಕೆ.ಜಿ.ಶಿವಮೂರ್ತಿ, ವೆಂಕಟೇಶ್, ನಾಗರಾಜು ಇತರರಿದ್ದರು.