ಸಿಮ್ಸ್ ನಿರ್ದೇಶಕನಿಗೆ ಕಠಿಣ ಕ್ರಮಕ್ಕೆ ಆಗ್ರಹ: ನಗರದಲ್ಲಿ ಡಿಎಸ್‌ಎಸ್ ಪ್ರತಿಭಟನೆ

1 (6)
Published on

ಮಂಡ್ಯ: ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಅವಹೇಳನ ಮಾಡಿದ್ದಾರೆನ್ನುವ ಆರೋಪಕ್ಕೆ ಸಂಬಂಧಿಸಿದಂತೆ ಚಾಮರಾಜನಗರದ ಸಿಮ್ಸ್ ನಿರ್ದೇಶಕ ಡಾ.ಸಂಜೀವರೆಡ್ಡಿ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿ ನಗರದಲ್ಲಿ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಕಾರ್ಯಕರ್ತರು, ಡಾ.ಸಂಜೀವರೆಡ್ಡಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅಂತೆಯೇ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮನವಿ ರವಾನಿಸಿದರು.

ಸ್ವಾತಂತ್ರೃ ಭಾರತಕ್ಕೆ ಸಂವಿಧಾನವನ್ನು ಬರೆದುಕೊಟ್ಟು ದೇಶದ ಸಮಗ್ರತೆ, ಸಾರ್ವಭೌಮತೆಗೆ ನೆರವಾಗಿ ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ತತ್ವದಡಿ ಭಾರತದ ಉಳಿವಿಗೆ ತಮ್ಮನ್ನೇ ಸಮರ್ಪಿಸಿಕೊಂಡ ರಾಷ್ಟ್ರನಾಯಕ ಅಂಬೇಡ್ಕರ್ ಅವರನ್ನು ನಿಂದಿಸುವ ಮೂಲಕ ಸಂಜೀವರೆಡ್ಡಿ ದೇಶದ್ರೋಹಿ ಕೃತ್ಯ ಎಸಗಿದ್ದಾರೆ. ಆದ್ದರಿಂದ ಸಿಮ್ಸ್ ನಿರ್ದೇಶಕನನ್ನು ಕೆಲಸದಿಂದ ವಜಾಗೊಳಿಸುವುದು ಮಾತ್ರವಲ್ಲದೆ ಟಾಡಾ ಕಾಯ್ದೆಯಡಿ ಬಂಧಿಸಿ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು. ಅಂತೆಯೇ ಅಂಬೇಡ್ಕರ್ ಅವರ ಅವಹೇಳನ ಮಾಡುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ರಾಜ್ಯಾದ್ಯಂತ ತೀವ್ರ ಚಳವಳಿ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ರಾಜ್ಯಾಧ್ಯಕ್ಷ ವೆಂಕಟಗಿರಿಯಯ್ಯ, ಜಿಲ್ಲಾಧ್ಯಕ್ಷ ಕೆ.ಎಂ.ಶ್ರೀನಿವಾಸ್, ಅನಿಲ್‌ಕುಮಾರ್, ಆನಂದ್, ಬಲರಾಮ್, ಸೋಮಶೇಖರ್, ಕುಮಾರ್, ಮಹಾದೇವ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net