ಅರಣ್ಯ ಅತಿಕ್ರಮಣ ಸಕ್ರಮಕ್ಕೆ ದಸಂಸ ಕೆಂಪುಸೇನೆ ಒತ್ತಾಯ

Press Meet
Published on

ಕಾರವಾರ: ಅರಣ್ಯ ಭೂಮಿ ಅತಿಕ್ರಮಣ ಸಕ್ರಮಕ್ಕೆ ರಾಜ್ಯ ಸರ್ಕಾರ ಕ್ರಮ ವಹಿಸಬೇಕು ಎಂದು ದಲಿತ ಸಂಘರ್ಷ ಸಮಿತಿ ಕೆಂಪು ಸೇನೆಯ ಪ್ರಧಾನ ಕಾರ್ಯದರ್ಶಿ ಎಂ.ಶ್ರೀನಿವಾಸ ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಗಣಿ ಉದ್ಯಮಿಗಳಿಗೆ, ಉದ್ಯಮಕ್ಕೆ ಅರಣ್ಯ ಭೂಮಿಯನ್ನು ಸರ್ಕಾರ ಮಂಜೂರು ಮಾಡಿದೆ. ಆದರೆ, ಅತಿಕ್ರಮಣ ಮಾಡಿ ಸಾಗುವಳಿ ಮಾಡುತ್ತಿರುವ, ಮನೆ ಕಟ್ಟಿಕೊಂಡಿರುವ ಬಡವರಿಗೆ ಭೂಮಿಯ ಹಕ್ಕು ನೀಡಲು ಯಾವುದೇ ಸರ್ಕಾರ ಮುಂದಾಗಿಲ್ಲ. ಅರಣ್ಯ ಹಾಗೂ ಇತರೆ ಅತಿಕ್ರಮಣದಾರರಿಗೆ ತಕ್ಷಣ ಸಾಗುವಳಿ ಚೀಟಿ ಕೊಡುವ ಕೆಲಸವಾಗಬೇಕು. ಇಲ್ಲದಿದಲ್ಲಿ ಬೆಂಗಳೂರಿನಲ್ಲಿ ತೀವ್ರ ಪ್ರತಿಭಟನೆ ನಡೆಸಲಿದ್ದೇವೆ ಎಂದು ಎಚ್ಚರಿಸಿದರು.

ಜಿಲ್ಲಾ ಅಧ್ಯಕ್ಷರ ನೇಮಕ:

ಗುರುವಾರ ನಗರದಲ್ಲಿ ನಡೆದ ಸಭೆಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕೆಂಪು ಸೇನೆಯ ಜಿಲ್ಲಾ ಸಮಿತಿಯನ್ನು ರಚನೆ ಮಾಡಲಾಯಿತು ಎಂದು ಸಂಘಟನೆಯ ಮುಖಂಡರು ವಿವರಿಸಿದರು.
ಉತ್ತರ ಕರ್ನಾಟಕ ಉಪಾಧ್ಯಕ್ಷರಾಗಿ ಬಿ.ಎನ್.ಸೂರ್ಯಪ್ರಕಾಶ, ಪ್ರಧಾನ ಕಾರ್ಯದರ್ಶಿಯಾಗಿ ಶಿವನಾಥ ದೇಹಳ್ಳಿ, ಜಿಲ್ಲಾ ಅಧ್ಯಕ್ಷರಾಗಿ ಉದಯ ಬಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ಮಾರುತಿ ಪರಶುರಾಮ ಮಟೇರ, ಉಪಾಧ್ಯಕ್ಷರಾಗಿ ಹನುಮಂತ ಕುರಾಡೆ, ಉಪಾಧ್ಯರಾಗಿ ನಾಗರಾಜ ಮಾದರ, ಹನುಮಂತ ತಳವಾರ, ಕಾರ್ಯಾಧ್ಯಕ್ಷರಾಗಿ ಹನುಮಂತಪ್ಪ ಮಂಚಾಕೆರೆ ಆಯ್ಕೆಯಾಗಿದ್ದಾರೆ ಎಂದು ತಿಳಿಸಿದರು. ಸಂಘಟನೆಯ ಸಿ.ಕೆ.ರವೀಂದ್ರನಾಥ, ವೀರಭದ್ರ ಗೌಡ, ಕೆ.ಎಂ.ಮುರಳಿ, ಸುದ್ದಿಗೋಷ್ಠಿಯಲ್ಲಿದ್ದರು.

ಪ್ರಸೂತಿ ತಜ್ಞರನ್ನು ನೇಮಿಸಿ


ಸಂಘಟನೆಯ ಉತ್ತರ ಕರ್ನಾಟಕ ಅಧ್ಯಕ್ಷ ಬಿ.ವಿ.ರಾಮಚಂದ್ರ ಮಾತನಾಡಿ, ಹಳಿಯಾಳ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಸೂತಿ ತಜ್ಞರಿಲ್ಲ.100 ಹಾಸಿಗೆ ಆಸ್ಪತ್ರೆಯಲ್ಲಿ ಸ್ಕ್ಯಾನಿಂಗ್ ಇಲ್ಲ. ಶಸ್ತ್ರ ಚಿಕಿತ್ಸೆಗಳು ನಡೆಯುತ್ತಿಲ್ಲ. ಈ ವ್ಯವಸ್ಥೆ ಸರಿ ಮಾಡದಿದ್ದರೆ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net