

ಅರಸೀಕೆರೆ: ಸಂವಿಧಾನ ಜಾಗೃತಿ ರಥ ಯಾತ್ರೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರ ಹಾಗೂ ಪೀಠಿಕೆಯನ್ನು ಕಡೆಗಣಿಸುವ ಜತೆಗೆ ಕಾರ್ಯಕ್ರಮದ ಬಗ್ಗೆ ನಿರ್ಲಕ್ಷೃ ತೋರಿದ ಬಾಣಾವರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿರುದ್ಧ ಕ್ರಮ ಜರುಗಿಸುವಂತೆ ಒತ್ತಾಯಿಸಿ ದಲಿತಪರ ಸಂಘಟನೆಗಳ ಮುಖಂಡರು ಸೋಮವಾರ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಮುಖಂಡ ಬಾಣಾವರ ವೆಂಕಟೇಶ್ ಮಾತನಾಡಿ, ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರ ಇಟ್ಟಿಲ್ಲ. ಜತೆಗೆ ಪೀಠಿಕೆಯನ್ನು ಕಡೆಗಣಿಸಲಾಗಿದೆ. ಈ ಸಂಬಂಧ ಪ್ರಶ್ನಿಸಿದರೆ ಉಡಾಫೆ ಉತ್ತರ ನೀಡಿದ್ದಾರೆ. ಸಂವಿಧಾನ ವಿರೋಧಿ ನಡೆ ಅನುಸರಿಸಿರುವ ಅಧಿಕಾರಿ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಬೇಕು ಎಂದು ಅಗ್ರಹಿಸಿದರು. ನಂತರ ತಹಸೀಲ್ದಾರ್ ಎಂ.ಜಿ.ಸಂತೋಷ್ ಕುಮಾರ್ ಅವರಿಗೆ ಮನವಿ ಸಲ್ಲಿಸಿದರು.
ಜಯಕುಮಾರ್, ಮಂಜುನಾಥ್, ಅಣ್ಣಾದೊರೈ, ಮೂಡ್ಲಪ್ಪ, ಬಾಲಮುರುಗನ್, ದೇವರಾಜ್, ಸಿದ್ದಪ್ಪ ಪಾಲ್ಗೊಂಡಿದ್ದರು.