ಸಾಲಬಾಧೆಯಿಂದ ರೈತ ನೇಣಿಗೆ ಶರಣು

Oplus_0
ಮೃತ ಸತೀಶ್
Published on

ಸೋಮವಾರಪೇಟೆ: ಸಾಲಬಾಧೆ ತಾಳದೆ ಕೃಷಿಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಮೀಪದ ತಾಕೇರಿ ಗ್ರಾಮದಲ್ಲಿ ಸೋಮವಾರ ಸಂಜೆ ನಡೆದಿದೆ.

ತಾಕೇರಿ ಗ್ರಾಮದ ಗಣಪತಿ ಅವರ ಪುತ್ರ ಎಂ.ಜಿ.ಸತೀಶ್ (42) ಆತ್ಮಹತ್ಯೆ ಮಾಡಿಕೊಂಡವರು. ಮನೆ ಸಮೀಪದ ಕಾಫಿ ತೋಟದಲ್ಲಿ ಮರಕ್ಕೆ ನೇಣು ಬಿಗಿದುಕೊಂಡಿದ್ದಾರೆ. ಸಂಜೆಯಾದರೂ ಮನೆಗೆ ಹಿಂದಿರುಗದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಹುಡುಕಾಟ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ.

ಪಟ್ಟಣದ ರಾಜ್‌ಮಹಲ್ ವಾಣಿಜ್ಯ ಸಂಕೀರ್ಣದಲ್ಲಿ ಕೃಷಿ ಸಂಬಂಧಿತ ಪರಿಕರಗಳ ಮರಾಟ ಅಂಗಡಿ ನಡೆಸುತ್ತಿದ್ದ ಸತೀಶ್, ಅತಿಯಾದ ಸಾಲ ಹೊಂದಿದ್ದರು. ಈ ಬಗ್ಗೆ ಮೃತರ ಪತ್ನಿ ಎಂ.ಎಸ್.ಸ್ವೀಟಿ ಸೋಮವಾರಪೇಟೆ ಠಾಣೆಯಲ್ಲಿ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕ್ರಮಕೈಗೊಂಡಿದ್ದಾರೆ. ಅಂತ್ಯಕ್ರಿಯೆ ಮಂಗಳವಾರ ಸ್ವಗ್ರಾಮದಲ್ಲಿ ನಡೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net